HomeKarnatakaಮೊದಲ ಬಾರಿ ಶಾಸಕರಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟವರಿಗೆ ಬಿಗ್ ಶಾಕ್: ಮಂತ್ರಿ ಪದವಿ ನೀಡಬಾರದೆಂದು...

ಮೊದಲ ಬಾರಿ ಶಾಸಕರಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟವರಿಗೆ ಬಿಗ್ ಶಾಕ್: ಮಂತ್ರಿ ಪದವಿ ನೀಡಬಾರದೆಂದು ನಿರ್ಣಯ

ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಬಾರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52,000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.

ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು. ಕಾರ್ಕಳದಲ್ಲಿ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಯೋಜನೆಯನ್ನು ಸದ್ಯದಲ್ಲೇ ಪೂರ್ಣಗೊಳಿಸಲಾಗುವುದು ಎಂದರು.  

ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular