HomeLatest Newsಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು: ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆ;...

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು: ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆ; ಆರೋಪಿಗಾಗಿ ಪೊಲೀಸರ ಹುಡುಕಾಟ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರದ ಮಹಲ್ ರೋಜಾದ ಮಲ್ಲಿಕಾರ್ಜುನ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುತ್ಯಾ ಎಂದೇ ಹೆಸರುವಾಸಿ. ಸಾಲದ್ದಕ್ಕೆ ಸ್ವಯಂ ಘೋಷಿತ ದೇವಮಾನವ ಎಂಬ ಬಿರುದು ಇಟ್ಟುಕೊಂಡಿದ್ದಾನೆ. ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಆಕೆಗೆ ಹಿಂಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಅಲ್ಲದೇ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ.

ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್​ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದೆ. ಅಲ್ಲದೇ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ, ಪ್ರಕರಣ ದಾಖಲಗುತ್ತಿದ್ದಂತೆ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುತ್ಯಾ, ಅಪ್ರಾಪ್ತ ಬಾಲಕಿಯೋರ್ವಳ ಕುತ್ತಿಗೆ ಹಿಡಿದು ಎತ್ತಿ ಮಂಚದ ಮೇಲೆ ನಿಲ್ಲಿಸುವುದು, ಆಕೆಯ ಕತ್ತು ಹಿಸುಕಿ ಅಸಭ್ಯವಾಗಿ ವರ್ತಿಸುವುದು ಸೇರಿದಂತೆ ಹಲವು ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲಿ ವೈರಲ್ ಆಗಿವೆ.

ಉತ್ತರ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಮಹೆಲ್ ಗ್ರಾಮದ 26 ವರ್ಷ ಆಸುಪಾಸಿನ ಮಲ್ಲಿಕಾರ್ಜುನ ಮುತ್ಯಾ, ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಿದ್ಧಿ ಪಡೆದಿದ್ದ. ಉತ್ತರ ಕರ್ನಾಟಕದ ಅನೇಕ ಭಕ್ತರು ಇವರನ್ನು ಅಪ್ಪಾಜಿ ಅಥವಾ ನಡೆದಾಡುವ ದೇವರು ಎಂದು ನಂಬಿ ಗೌರವಿಸುತ್ತಾರೆ. ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಮುತ್ಯಾ, ಅಪಾರ ಅನುಯಾಯಿಗಳನ್ನು ಹೊಂದಿದ್ದಾರೆ. ಸ್ವಯಂ ಘೋಷಿತ ಈ ದೇವಮಾನವ ಮಕ್ಕಳನ್ನು ಹಿಂಸಿಸುವ, ಅಸಭ್ಯವಾಗಿ ವರ್ತಿಸಿ ವಿಕೃತ ಆನಂದ ಪಡುವ ವಿಚಿತ್ರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೇ ಕ್ಷಣದಲ್ಲಿ ಮುತ್ಯಾ ಬಂಧನವಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular