HomeKarnatakaಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ: ಪತ್ನಿ-ಮಗ ಸೇರಿ ನಾಲ್ವರು ಅರೆಸ್ಟ್

ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ: ಪತ್ನಿ-ಮಗ ಸೇರಿ ನಾಲ್ವರು ಅರೆಸ್ಟ್

ಬೆಳಗಾವಿ: ಕಿತ್ತೂರುನ ಹಿರೇನಂದಿಯಲ್ಲಿ ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಪತ್ನಿ, ಮಗ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯಲ್ಲಿ ಕಲ್ಮೇಶ್ ಕೋಟಿ ಎಂಬಾತನ್ನು ಬರ್ಬರವಾಗಿ ಕೊಲೆಗೈದು ಮರ್ಮಾಂಗ ಕತ್ತರಿಸಿದ್ದ ಘಟನೆ ನಡೆದಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಪತ್ನಿ, ಮಗ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮೂರು ಎಕರೆ ಆಸ್ತಿ ವಿವಾದ ಹಾಗೂ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿದ್ದು, ಪತ್ನಿ ಮತ್ತು ಪುತ್ರನ ಸಾಥ್​ನಿಂದಲೇ ಕೃತ್ಯ ನಡೆದಿದೆ ಎಂಬುದನ್ನು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಗ್ರಾಮ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ಮೃತ ವ್ಯಕ್ತಿ ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ ಕೋಟಿ ಎಂದು ಗುರುತಿಸಲಾಗಿತ್ತು. ತುಮಕೂರಿನಲ್ಲಿ ಹೋಮ್ ಕೇರ್ ಉದ್ಯೋಗದಲ್ಲಿ ತೊಡಗಿದ್ದ ಕಲ್ಮೇಶ್, ಶಿವರಾತ್ರಿ ಹಬ್ಬಕ್ಕೆ ಊರಿಗೆ ಬಂದಿದ್ದ. ಈ ವೇಳೆ ಸಂಚು ರೂಪಿಸಿ ಕೊಲೆಗೈಯಲಾಗಿದೆ.

ಪಾರ್ಟಿ ಮಾಡೋಣ ಎಂದು ಹೇಳಿ ಜಮೀನಿಗೆ ಕರೆದೊಯ್ದ ಆರೋಪಿಗಳು, ಹಲ್ಲೆ ಮಾಡಿ, ಮರ್ಮಾಂಗ ಕತ್ತರಿಸಿ ಕೊಲೆ ಮಾಡಿದ್ದರು. ಕೊಲೆಗೈದ ಬಳಿಕ ಆರೋಪಿಗಳಲ್ಲಿ ಒಬ್ಬ ತನ್ನ ಅಕ್ಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದ.

ಕೊಲೆಗೆ ಸಾಥ್ ನೀಡಿದ್ದೇ ಪತ್ನಿ ಕಸ್ತೂರಿ ಮತ್ತು ಪುತ್ರ ಕಿರಣ್ ಶವ ಪತ್ತೆಯಾದ ನಾಲ್ಕು ದಿನಗಳ ಬಳಿಕ ಗುರುತು ಪತ್ತೆಗೆ ಬಂದು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು. ತನಿಖೆ ಬಳಿಕ ಪೊಲೀಸರು ಕಸ್ತೂರಿ, ಮಗ ಕಿರಣ್ ಹಾಗೂ ಕಲ್ಮೇಶ್ ಬಾಮೈದ ಮಲ್ಲೇಶ ಅಂಬಣ್ಣವರ (32) ಹಾಗೂ ಅವನ ಸ್ನೇಹಿತ ಮುದುಕಪ್ಪ ಕೋಲೇಕರ್ ನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಕಿತ್ತೂರು ಠಾಣೆ ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ.

ಕಲ್ಮೇಶ್ ಮತ್ತು ಪತ್ನಿ ಕಸ್ತೂರಿ ಕಳೆದ 12 ವರ್ಷಗಳಿಂದ ದಾಂಪತ್ಯ ಕಲಹದ ಹಿನ್ನೆಲೆ ದೂರವಿದ್ದು, ಕಸ್ತೂರಿ ಪುತ್ರನೊಂದಿಗೆ ಕುಂದಗೋಳದಲ್ಲಿರುವ ತವರು ಮನೆಯಲ್ಲಿ ವಾಸವಾಗಿದ್ದರು. ದಂಪತಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಐದು ವರ್ಷಗಳ ಹಿಂದೆ ಪುತ್ರಿಯ ಮದುವೆಗೆ 8 ಲಕ್ಷ ರೂಪಾಯಿ ಸಾಲವನ್ನು ಸಹೋದರ ಮಲ್ಲೇಶ ಅಂಬಣ್ಣವರಿಂದ ಪಡೆದಿದ್ದ ಕಸ್ತೂರಿ, ಕಲ್ಮೇಶ್ ಹೆಸರಿನ ಮೂರು ಎಕರೆ ಪಿತ್ರಾರ್ಜಿತ ಜಮೀನನ್ನು ಅಡಮಾನ ಇಟ್ಟು ಹಣ ಪಡೆದಿದ್ದಳು.

ಆದರೆ, ಜಮೀನು ಬರೆದುಕೊಡಲು ಕಲ್ಮೇಶ್ ನಿರಾಕರಿಸಿದ್ದಲ್ಲದೆ, ಸಾಲ ಮರುಪಾವತಿಗಾಗಿ ಒತ್ತಾಯಿಸುತ್ತಿದ್ದ. ಇದರಿಂದ ಬೇಸತ್ತ ಕಸ್ತೂರಿ, ತನ್ನ ಸಹೋದರರೊಂದಿಗೆ ಸೇರಿ ಸಂಚು ರೂಪಿಸಿದ್ದಳು ಎನ್ನಲಾಗಿದೆ. ಪತಿ ಸತ್ತರೆ ಜಮೀನು ತನ್ನ ಹೆಸರಿಗೆ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ಕಲ್ಮೇಶ್ ನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular