HomeLatest News'ವ್ಯಾಜ್ಯ' ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಮತ್ತೊಂದು ಅವಕಾಶ : ಮಾ.14 ರಂದು ರಾಷ್ಟ್ರೀಯ ಲೋಕ ಅದಾಲತ್

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಮತ್ತೊಂದು ಅವಕಾಶ : ಮಾ.14 ರಂದು ರಾಷ್ಟ್ರೀಯ ಲೋಕ ಅದಾಲತ್

ರಾಷ್ಟ್ರೀಯ  ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾರ್ಚ್ 14 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟ್ರೀಯ  ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು.

ರಾಷ್ಟ್ರೀ  ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular