HomeKarnatakaBREAKING: ರಾಜ್ಯದಲ್ಲಿ ಪವರ್ ಫೈಟಿಂಗ್ ಹೊತ್ತಲ್ಲೇ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರು...

BREAKING: ರಾಜ್ಯದಲ್ಲಿ ಪವರ್ ಫೈಟಿಂಗ್ ಹೊತ್ತಲ್ಲೇ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರು ಭೇಟಿ: ಕಾಂಗ್ರೆಸ್ ಪಾಳಯದಲ್ಲಿ ಹೆಚ್ಚಿದ ಕುತೂಹಲ

ಬೆಂಗಳೂರು: ಸಂಸದೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನ ಪುತ್ರನೊಂದಿಗೆ ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ್ದಾರೆ. ನಿನ್ನೆ ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು ನಂತರ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಾಯಕನ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು ಭೇಟಿ ವೇಳೆ ರಾಬರ್ಟ್ ವಾದ್ರಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೆಂಗಳೂರಿನ ಮಸೀದಿಯಲ್ಲಿ ಅವರು ಆಪ್ತ ಸ್ನೇಹಿತರೊಂದಿಗೆ ನಮಾಜ್ ನಲ್ಲಿ ಭಾಗಿಯಾಗಿದ್ದಾರೆ. ಸುಮಾರು 30 ನಿಮಿಷ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಬರ್ಟ್ ವಾದ್ರಾ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಆದರೆ, ಪವರ್ ಫೈಟಿಂಗ್ ಸಂದರ್ಭದಲ್ಲಿಯೇ ರಾಬರ್ಟ್ ವಾದ್ರಾ ರಾಜ್ಯಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ವಾದ್ರಾ ಸಂಪರ್ಕದಲ್ಲಿದ್ದಾರೆ. ಕೆಲವರು ಭೇಟಿಗೆ ಸಮಯ ಕೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ವಾದ್ರಾ ಅವರ ಭೇಟಿ ಭಾರಿ ಚರ್ಚೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular