HomeKarnatakaರಾಜ್ಯಾದ್ಯಂತ ನೀರಿನ ಗುಣಮಟ್ಟ ಪರೀಕ್ಷೆಗೆ ಒತ್ತು: 52 ಕೋಟಿ ರೂ. ವೆಚ್ಚ

ರಾಜ್ಯಾದ್ಯಂತ ನೀರಿನ ಗುಣಮಟ್ಟ ಪರೀಕ್ಷೆಗೆ ಒತ್ತು: 52 ಕೋಟಿ ರೂ. ವೆಚ್ಚ

ರಾಜ್ಯಾದ್ಯಂತ ಸ್ಥಾಪಿಸಲಾಗಿರುವ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ನಿರ್ವಹಣೆ ಪ್ರಯೋಗಾಲಯಗಳ ಮೂಲಕ ನೀರಿನ ಗುಣಮಟ್ಟ ಪರೀಕ್ಷೆಗಳನ್ನು ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ನಮ್ಮ ಸರ್ಕಾರ 2024-25ನೇ ಸಾಲಿನಲ್ಲಿ 23.52 ಕೋಟಿ ರೂ. ಮತ್ತು ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 28.85 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಲಜೀವನ ಮಿಷನ್ ಯೋಜನೆಯಡಿ ನೀರಿನ ಗುಣಮಟ್ಟ ಮೇಲ್ವಿಚಾರಣೆ ಮತ್ತು ಕಣ್ಗಾವಲು ಕಾರ್ಯಕ್ರಮಕ್ಕೆ ಶೇಕಡ ಎರಡರಷ್ಟು ಅನುದಾನ ನೀಡಬೇಕು. ಆದರೆ ನೀಡಿಲ್ಲ ಎಂದು ಹೇಳಿದ್ದಾರೆ.

ಗ್ರಾಮೀಣ ಜನವಸತಿ ಪ್ರದೇಶಗಳ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿಲ್ಲಾ ಮತ್ತು 47 ತಾಲ್ಲೂಕು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಕಲುಷಿತ ನೀರು ಕಂಡು ಬಂದರೆ ಮರು ಪರೀಕ್ಷೆಗೆ ಒಳಪಡಿಸಿ ಖಚಿತಪಡಿಸಿಕೊಂಡು ಪರ್ಯಾಯ ಮೂಲಗಳಿಂದ ನೀರು ಒದಗಿಸಲಾಗುತ್ತಿದೆ. ಅಲ್ಲದೆ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಒತ್ತು ನೀಡಲು ಮಾನ್ಯತೆ ಪಡೆದ ಖಾಸಗಿ ಪ್ರಯೋಗಗಳಲ್ಲಿ ನೀರಿನ ಮಾದರಿ ಪರೀಕ್ಷೆ ಮಾಡಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular