ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 8ನೇ ರೈಲು ಸೇರ್ಪಡೆಯಾಗಿದ್ದು, ಫೆಬ್ರವರಿ 27ರಿಂದ ಸೇವೆಗೆ ಲಭ್ಯವಾಗಿದೆ. ಸೋಮವಾರದಿಂದ ಶನಿವಾರದವರೆಗೆ ಪೀಕ್ ಅವಧಿಯಲ್ಲಿ 9 ನಿಮಿಷಕ್ಕೆ, ನಾನ್ ಪೀಕ್ ಅವಧಿಯಲ್ಲಿ 14 ನಿಮಿಷ ಅಂತರದಲ್ಲಿ ಮೆಟ್ರೋ ರೈಲುಗಳು ಸಂಚರಿಸಲಿವೆ.
ದಿನಾಂಕ 27ನೇ ಫೆಬ್ರವರಿ 2026 ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲಿನ ಸೇರ್ಪಡೆ ಬಗ್ಗೆ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ.
ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ, ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.
ಮಾರ್ಚ್ 1 ರಂದು ಮುಂಜಾನೆ 5 ಗಂಟೆಯಿಂದ ನಮ್ಮ ಮೆಟ್ರೋ ಸೇವೆ ಆರಂಭ
ಬೆಂಗಳೂರು ನಗರದಲ್ಲಿ ದಿನಾಂಕ 1ನೇ ಮಾರ್ಚ್, 2026(ಭಾನುವಾರ) ರಂದು ನಡೆಯಲಿರುವ ರಾಜ್ಯ ಮಟ್ಟದ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಅನುಕೂಲವಾಗುವಂತೆ ಬಿಎಂಆರ್ಸಿಎಲ್, ನೇರಳೆ ಮಾರ್ಗದ ವೈಟ್ಫೀಲ್ಡ್ ಮತ್ತು ಚಲ್ಲಘಟ್ಟ ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಹಾಗೂ ಹಳದಿ ಮಾರ್ಗದ ಬೊಮ್ಮಸಂದ್ರ ಮತ್ತು ಆರ್.ವಿ. ರಸ್ತೆ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ಗಳಿಂದ ದಿನಾಂಕ 01.03.2026 ರಂದು ಬೆಳಿಗ್ಗೆ 7 ಗಂಟೆ ಬದಲಾಗಿ ಮುಂಜಾನೆ 5 ಗಂಟೆಗೆ ಪ್ರಾರಂಭಿಸಲಿದೆ. ಸಾರ್ವಜನಿಕರು ಹಾಗೂ ಮೆಟ್ರೋ’ ಪ್ರಯಾಣಿಕರು ವಿಶೇಷ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.

