HomeKarnatakaBREAKING : ‘ಪೋಕ್ಸೋ ಪ್ರಕರಣ’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ.!

BREAKING : ‘ಪೋಕ್ಸೋ ಪ್ರಕರಣ’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ.!


ಕಲಬುರಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಲ್ಲಿಕಾರ್ಜುನ ಮುತ್ಯಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಪೋಷಕರಿಂದ ದೂರು ಬಂದಿಲ್ಲ ಸಂತ್ರಸ್ತೆಯ ಪೋಷಕರು ಯಾವುದೇ ರೀತಿಯ ದೂರು ನೀಡಿಲ್ಲ. ಆದರೂ ಪೊಲೀಸರು ಸ್ವಯಂಪ್ರೇರಿತವಾಗಿ ಅಥವಾ ಅನ್ಯ ಮೂಲಗಳಿಂದ ಎಫ್ಐಆರ್ (FIR) ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಎಫ್ಐಆರ್ ರದ್ದತಿಗೆ ಮನವಿ: ಘಟನೆಯಲ್ಲಿ ಪೋಷಕರೇ ದೂರು ನೀಡದಿದ್ದ ಮೇಲೆ ಈ ಪ್ರಕರಣಕ್ಕೆ ಕಾನೂನಿನ ಮಾನ್ಯತೆ ಇರುವುದಿಲ್ಲ, ಆದ್ದರಿಂದ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಮಲ್ಲಿಕಾರ್ಜುನ ಮುತ್ಯಾ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಮಲ್ಲಿಕಾರ್ಜುನ ಮುತ್ಯಾ ಅವರ ಮೇಲೆ ಕೇಳಿಬಂದಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈಗ ಈ ಪ್ರಕರಣ ಕಾನೂನು ಹೋರಾಟದ ಹಂತಕ್ಕೆ ತಲುಪಿದ್ದು, ಹೈಕೋರ್ಟ್ ಈ ಅರ್ಜಿಯ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಿಕಾರ್ಜುನ ಮುತ್ಯಾ ಅವರು ಕಲಬುರಗಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಶ್ರೀಗಳಾಗಿದ್ದು, ಇವರ ಮೇಲೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಗೊಳಿಸುವಂತೆ ಕೋರಿ ಅವರು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular