HomeKarnatakaBreaking News: ಸುಪ್ರೀಂಕೋರ್ಟ್‌ನಿಂದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ರಿಲೀಫ್

Breaking News: ಸುಪ್ರೀಂಕೋರ್ಟ್‌ನಿಂದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ರಿಲೀಫ್

ಸುಪ್ರೀಂಕೋರ್ಟ್‌ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.

ಈ ಕುರಿತು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ತನಕ ಕೋರ್ಟ್ ಮುಂದೂಡಿಕೆ ಮಾಡಿದ್ದು, ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಕೆ ಮಾಡಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಅವರಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು 6 ತಿಂಗಳ ಕಾಲಾವಕಾಶ ನೀಡಿದೆ.

ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿಕೆ ಮಾಡಿದ ಕೋರ್ಟ್, ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಅನರ್ಹಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.

ಅಲ್ಲದೇ ಅರ್ಜಿ ವಿಚಾರಣೆ ಸಮಯದಲ್ಲಿ ಕೋರ್ಟ್ ಚುನಾವಣೆಗೆ ಸ್ಪರ್ಧಿಸುವಾಗ ಅಭ್ಯರ್ಥಿ ಒಟ್ಟು ಆದಾಯವನ್ನು ಘೋಷಣೆ ಮಾಡಿದರೆ ಸಾಕೇ? ಅಥವ ವ್ಯವಹಾರದ ಕುರಿತು ಸಹ ಉಲ್ಲೇಖಿಸಬೇಕೆ? ಎಂಬ ಕುರಿತು ವಿವರವಾದ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

 ಬಾಗೇಪಲ್ಲಿಯ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಚುನಾವಣಾ ತರಕಾರು ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಫೆಬ್ರವರಿ 16ರಂದು ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಅನರ್ಹಗೊಳಿಸಿ ಆದೇಶ ನೀಡಿತ್ತು.

2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಗೇಪಲ್ಲಿಯಲ್ಲಿ ಕಣಕ್ಕಿಳಿದಿದ್ದರು. ಅವರು ಚುನಾವಣೆಯಲ್ಲಿ 82,128 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.

ಎದುರಾಳಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು 62,949 ಮತಗಳನ್ನು ಪಡೆದು ಸೋಲು ಕಂಡಿದ್ದರು. ಸಿ.ಮುನಿರಾಜು ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ಗೆ 2023ರ ಜೂನ್‌ನಲ್ಲಿ ಸಲ್ಲಿಕೆ ಮಾಡಿದ್ದರು.

ಎಸ್.ಎನ್. ಸುಬ್ಬಾರೆಡ್ಡಿ ಸರಿಯಾಗಿ ಆದಾಯವನ್ನು ಉಲ್ಲೇಖಿಸಿಲ್ಲ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು. ಪರಾಜಿತ ಅಭ್ಯರ್ಥಿಯಾದ ನನ್ನನ್ನು ವಿಜೇತ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular