HomeKarnatakaBREAKING: ಬಳ್ಳಾರಿ ಕಾಲೇಜಿನಲ್ಲಿ ಡ್ರಗ್ಸ್, ಗಾಂಜಾ ಸಪ್ಲೈ: ABVP ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್

BREAKING: ಬಳ್ಳಾರಿ ಕಾಲೇಜಿನಲ್ಲಿ ಡ್ರಗ್ಸ್, ಗಾಂಜಾ ಸಪ್ಲೈ: ABVP ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್

ಬಳ್ಳಾರಿ: ಬಳ್ಳಾರಿಯ ಖಾಸಗಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆಗುತ್ತಿದ್ದು, ಇದರ ವಿರುದ್ಧ ಕಾಲೇಜು ಆಡಳಿತ ಮಂಡಳಿ, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಬಳ್ಳಾರಿ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಡ್ರಗ್ಸ್, ಗಾಂಜಾ ಸಪ್ಲೈ ಆಗುತ್ತಿದ್ದು, ವಿದ್ಯಾರ್ಥಿಗಳು ನಶೆಯಲ್ಲಿಯೇ ಕಾಅಲೇಜಿಗೆ ಬಂದು ಪಾಠ ಕೇಳುತ್ತಿದ್ದಾರೆ. ಕಾಲೇಜಿನ ಆವರಣದಲಿಯೇ ಹಲವು ವಿದ್ಯಾರ್ಥಿಗಳು ಸಿಗರೇಟ್ ಸೇದುತ್ತಾ ಅಮಲಿನಲ್ಲಿ ತೇಲುತ್ತಿದ್ದರೂ ಈವರೆಗೂ ಕಾಲೇಜು ಆಡಳಿತ ಮಂಡಳಿಯಾಗಲಿ, ಪೊಲೀಸರಾಗಲಿ ಅಂತಹ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸರ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜಿನ ಬಳಿ ಜಮಾವಣೆಗೊಂಡ ಎಬಿವಿಪಿ ಕಾರ್ಯಕರ್ತರು, ಕಾಲೇಜು ಆಡಳಿತ ಮಂಡಳಿ ಹಾಗೂ ಪೊಲೀಸರ ವಿರುದ್ಧ ಕಿಡಿಕಾರಿದರು. ಪ್ರತಿಭಟನೆಯ ವೇಳೆ ಕೆಲ ಉದ್ರಿಕ್ತರು ಕಾಲೇಜಿನ ಕಿಡಕಿ ಗಾಜುಗಳನ್ನು ಪುಡಿಪುಡಿ ಮಾಡಿರುವ ಘಟನೆಯೂ ನಡೆದಿದೆ.

ಕಾಲೇಜಿಗೆ ಮುತ್ತಿಗೆ ಹಾಕಲು ಮುಂದಾದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಾರೆ. ಈ ವೇಳೆ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬಳ್ಳಾರಿ ಕಾಲೇಜುಗಳಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆಗುತ್ತಿದ್ದು, ವಿದ್ಯಾರ್ಥಿಗಳು ಮಾದಕವಸ್ತುಗಳ ವ್ಯಸನಕ್ಕೀಡಾಗಿದ್ದಾರೆ ಎಂದು ಈ ಹಿಂದೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular