HomeLatest NewsBIG NEWS : ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

BIG NEWS : ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ರಾಯಚೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಯಚೂರಿನಲ್ಲಿ ಭಾಗವಹಿಸಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿತ್ತು.  ಸಮುದಾಯದ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸ್ವಾಮೀಜಿ ದಾಖಲಿಸಲಾಗಿತ್ತು.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸ್ವಾಮೀಜಿಯವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಫೆಬ್ರವರಿ 18, 2026ರ ಬುಧವಾರ ರಾತ್ರಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದ ಕೂಡಲೇ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯರು ಶ್ರೀಗಳಿಗೆ ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಮತ್ತು ನಿಯಮಿತವಾಗಿ ಔಷಧೋಪಚಾರಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular