HomeKarnatakaಕರ್ನಾಟಕ ಬಜೆಟ್ 2026: ಬೀದರ್‌ ಜಿಲ್ಲೆಗೆ ಬಹುದೊಡ್ಡ ಕೊಡುಗೆ

ಕರ್ನಾಟಕ ಬಜೆಟ್ 2026: ಬೀದರ್‌ ಜಿಲ್ಲೆಗೆ ಬಹುದೊಡ್ಡ ಕೊಡುಗೆ

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಕರ್ನಾಟಕ ಬಜೆಟ್ 2026 ಮಂಡಿಸಲಿದ್ದಾರೆ. ಈ ಬಜೆಟ್‌ನಲ್ಲಿ ಅವರು ಬೀದರ್ ಜಿಲ್ಲೆಗೆ ದೊಡ್ಡ ಕೊಡುಗೆ ನೀಡುವ ನಿರೀಕ್ಷೆ ಇದೆ.

ಬಸವ ತತ್ವದ ಜಾಗತಿಕ ವಿಸ್ತರಣೆಗೆ ‘ವಚನ ವಿಶ್ವವಿದ್ಯಾಲಯ’ವನ್ನು ಬೀದರ್ ಜಿಲ್ಲೆಯಲ್ಲಿ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.

ಸಚಿವ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಹಲವು ಮಠಾಧೀಶರು ಸಿದ್ದರಾಮಯ್ಯ ಭೇಟಿಯಾಗಿದ್ದರು. ನಿಯೋಗದಲ್ಲಿ ನಾಡೋಜ ಬಸವಲಿಂಗ ಪಟ್ಟದ್ದದೇವರು, ಡಾ. ತೋಂಟದ ಸಿದ್ದರಾಮ ಸ್ವಾಮಿಗಳು, ಗುರುಮಹಾಂತಾ ಸ್ವಾಮಿಗಳು, ಪ್ರಭುಚನ್ನಬಸವ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಗಳ ಗುರುಗಳು ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನವಿ ಏನು?: ಬಸವಾದಿ ಶರಣರ ವಚನಗಳಲ್ಲಿನ ಮಾನವೀಯ ಹಾಗೂ ಸಾಮಾಜಿಕ ಆಶಯಗಳನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಯ ಅಗತ್ಯತೆ ಇದೆ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿತು.

ಕಳೆದ ವರ್ಷ ಅಕ್ಟೋಬರ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಕುರಿತು ಭರವಸೆಯನ್ನು ನೀಡಿದ್ದರು.

ಈ ಭರವಸೆಯಂತೆ ಬಸವಕಲ್ಯಾಣದಲ್ಲಿ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ. ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾನಿಲಯ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದರು.

ಈ ಹಿಂದೆ ವಚನ ವಿಶ್ವವಿದ್ಯಾಲಯವನ್ನು ಬಸವಕಲ್ಯಾಣ ಅಥವಾ ಕೂಡಲಸಂಗಮದಲ್ಲಿ ಸ್ಥಾಪನೆ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿದ್ದವು. ಈ ಎರಡು ಸ್ಥಳಗಳು 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರೊಂದಿಗಿನ ಸಂಬಂಧಕ್ಕೆ ಹೆಸರುವಾಸಿಯಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular