HomeLive Newsಹಟ್ಟಿ ಚಿನ್ನದ ಗಣಿ ದ್ವಾರದ ಬಳಿ ಸ್ಫೋಟಕಗಳು ಪತ್ತೆ

ಹಟ್ಟಿ ಚಿನ್ನದ ಗಣಿ ದ್ವಾರದ ಬಳಿ ಸ್ಫೋಟಕಗಳು ಪತ್ತೆ

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಇದು ಸ್ಥಳದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸ್ಫೋಟಕ್ಕೆ ಬಳಸುವ 15ಕ್ಕು ಹೆಚ್ಚು ಕಾಟ್ರಿಜ್ ಗಳು ಹಟ್ಟಿ ಚಿನದ ಗಣಿ ಕಂಪನಿಯ ಗೇಟ್ ಬಳಿ ಬಿದ್ದಿರುವುದು ಪತ್ತೆಯಾಗಿದೆ. ಈ ಸ್ಫೋಟಕ ವಸ್ತುಗಳು ಯಾರುಗೆ ಸೇರಿದ್ದು ಎಂಬುದು ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ನಲ್ಲಿ ಹೊರಟಿದ್ದ ಸವಾರರು ಮದ್ದುಗಳ ಕಾಟ್ರಿಜ್ ಗಳನ್ನು ಬೀಳಿಸಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ ಅಪಾಯಕಾರಿ ಸ್ಫೋಟಕಗಳನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೇ ಬೈಕ್ ನಲ್ಲಿ ಸಾಗಿಸುತ್ತಿದ್ದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular