HomeKarnatakaBREAKING: ನೇಪಾಳ ಪ್ರವಾಸಕ್ಕೆ ತೆರಳಿದ್ದ 170 ಕನ್ನಡಿಗರು ಅತಂತ್ರ: 2 ದಿನದಿಂದ ವಿಮಾನದಲ್ಲೇ ಸುತ್ತಾಟ

BREAKING: ನೇಪಾಳ ಪ್ರವಾಸಕ್ಕೆ ತೆರಳಿದ್ದ 170 ಕನ್ನಡಿಗರು ಅತಂತ್ರ: 2 ದಿನದಿಂದ ವಿಮಾನದಲ್ಲೇ ಸುತ್ತಾಟ

ಬೆಂಗಳೂರು: ಎರಡು ದಿನದಿಂದ ಏರ್ ಇಂಡಿಯಾ ವಿಮಾನದಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಿಂದ ನೇಪಾಳ ರಾಜಧಾನಿ ಕಠ್ಮಂಡುಗೆ ಕನ್ನಡಿಗರು ಪ್ರಯಾಣ ಬೆಳೆಸಬೇಕಿತ್ತು. ಆದರೆ ಸಾಧ್ಯವಾಗಿಲ್ಲ.

ನಿನ್ನೆ ಬೆಳಿಗ್ಗೆ 10.30 ಕ್ಕೆ 170 ಜನ ಬೆಂಗಳೂರು ದೇವನಹಳ್ಳಿ ವಿಮಾನ ನಿಲ್ದಾಣದಿಂದ ವಿಮಾನ ಹತ್ತಿದ್ದಾರೆ. ಆದರೆ ಕಠ್ಮಂಡು ತಲುಪಿಸದೇ ಅಲ್ಲಿ ಸಮಸ್ಯೆ ಎಂದು ದಿನಪೂರ್ತಿ ಸುತ್ತಾಡಿಸಿ ನಿನ್ನೆ ರಾತ್ರಿ 9.45 ಕ್ಕೆ ದೇವನಹಳ್ಳಿ ಏರ್ಪೋರ್ಟ್ ಗೆ ವಾಪಸ್ ಕರೆ ತರಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅದೇ ವಿಮಾನದಲ್ಲಿ ಏರ್ ಇಂಡಿಯಾ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.

ಏರ್ ಇಂಡಿಯಾ ವಿಮಾನದಲ್ಲಿ 170 ಕನ್ನಡಿಗರನ್ನು ಕರೆದುಕೊಂಡು ಹೋಗಿದ್ದು, ಕಠ್ಮಂಡುವಿನಲ್ಲಿ ವಿಮಾನ ಇಳಿಸದೆ ಲಕ್ನೋಗೆ ಕರೆದುಕೊಂಡು ಹೋಗಿದ್ದಾರೆ. ಪ್ರಸ್ತುತ ಲಕ್ನೋದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಕನ್ನಡಿಗರು ಕುಳಿತುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯಿಂದ ಕಠ್ಮಂಡುವಿನಲ್ಲಿ ವಿಮಾನ ಇಳಿಸದೆ, ಇತ್ತ ವಾಪಸ್ ಕರೆತಂದು ಬೆಂಗಳೂರಿನಲ್ಲಿಯೂ ಬಿಡದೆ ಅಲೆದಾಡಿಸುತ್ತಿದ್ದಾರೆ. ಸರಿಯಾಗಿ ಊಟ, ನೀರು ಕೊಡದೆ ತೊಂದರೆ ಕೊಡುತ್ತಿದ್ದಾರೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ. ನೇಪಾಳ ಪ್ರವಾಸಕ್ಕೆ ತೆರಳಿದ್ದ 170 ಕನ್ನಡಿಗರು ಎರಡು ದಿನದಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸಿಲುಕಿ ಪರದಾಟ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular