ಬೆಂಗಳೂರು: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕುರಿತು ಆಸಕ್ತಿ ಮೂಡಿಸಲು ಹಾಗೂ ಪ್ರಾತ್ಯಕ್ಷಿಕೆ, ಚಟುವಟಿಕೆಗಳ ಮೂಲಕ ವಿಜ್ಞಾನ ಕಲಿಕೆ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ 60 ಕ್ಕೂ ಹೆಚ್ಚು ವಸತಿ ಶಾಲೆಗಳಲ್ಲಿ ಇನ್ನೊವೇಶನ್ ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ ನೆಹರು ಸ್ಟ್ರೀಮ್ ಲ್ಯಾಬ್ ಗಳು ಹಾಗೂ ಇನೋವೇಷನ್ ಲ್ಯಾಬ್ ಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲದೇ, ಕಲ್ಯಾಣ ಕರ್ನಾಟಕ ಪ್ರದೇಶದ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ಥಳೀಯ ಅಭಿವೃದ್ಧಿ ನಿಗಮ(KKRDB) ಸಹಯೋಗದಲ್ಲಿ ನೆಹರು ಸ್ಟ್ರೀಮ್ ಲ್ಯಾಬ್ಗಳನ್ನು ಸ್ಥಾಪಿಸಲಾಗುತ್ತಿದೆ. 2025–26ನೇ ಸಾಲಿನಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದ 6 ಕೋಟಿ ರೂಪಾಯಿಯಡಿ 60 ವಸತಿ ಶಾಲೆಗಳಲ್ಲಿ ಇನೋವೇಷನ್ ಲ್ಯಾಬ್ಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

