HomeKarnatakaಬ್ರಾಹ್ಮಣರ ಬಗ್ಗೆ ಅವಹೇಳನ: ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ವಿರುದ್ಧ ದೂರು ದಾಖಲು

ಬ್ರಾಹ್ಮಣರ ಬಗ್ಗೆ ಅವಹೇಳನ: ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ವಿರುದ್ಧ ದೂರು ದಾಖಲು

ಕಾರವಾರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ವಿರುದ್ಧ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊನ್ನಾವರ ತಾಲೂಕಿನ ಮೊಳ್ಕೋಡಿನ ಶ್ರೀರಾಮ ಮಂದಿರ ಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮದಲ್ಲಿ ಸೀತಾರಾಮ ಕಲ್ಯಾಣೋತ್ಸವ ಸಭಾಭವನದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ರಾಮಪ್ಪ ವಿರುದ್ಧ ಸಾಗರದ ರಾಜೇಂದ್ರ ಪ್ರಸಾದ್ ದೂರು ನೀಡಿದ್ದಾರೆ.

ಜನವರಿ 31ರ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಮಪ್ಪ ಬ್ರಾಹ್ಮಣರನ್ನು ನಿಂದಿಸಿದ್ದರು. ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶ ಕಾರಣವಾಗಿತ್ತು. ಸಾಗರದಲ್ಲಿ ರಾಜೇಂದ್ರ ಪ್ರಸಾದ್ ಮೊದಲು ದೂರು ದಾಖಲಿಸಿದ್ದು, ಪ್ರಕರಣವನ್ನು ಹೊನ್ನಾವರಕ್ಕೆ ವರ್ಗಾವಣೆ ಮಾಡಿ ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular