HomeKarnatakaBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬೈಕ್‌ʼಗೆ ಟ್ರಕ್‌ ಡಿಕ್ಕಿಯಾಗಿ ಸ್ಥಳದಲ್ಲೇ...

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬೈಕ್‌ʼಗೆ ಟ್ರಕ್‌ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು

ರಾಯಚೂರು: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಮೊಹಮದ್ ಅಲಿ, ಫಯಾಜ್ ಮತ್ತು ನೂರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಘಟನೆಯ ವಿವರ: ಟ್ರಕ್ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆಗೆ ಹೊರಟಿತ್ತು. ಬಸವೇಶ್ವರ ವೃತ್ತದ ಬಳಿ ಬರುತ್ತಿದ್ದಂತೆ ಯುವಕರಿದ್ದ ಬೈಕ್‌ಗೆ ಟ್ರಕ್ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಮೂವರೂ ಯುವಕರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಟ್ರಕ್ ಚಾಲಕ, ವಾಹನವನ್ನು ನಿಲ್ಲಿಸದೆ ಟ್ರಕ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.ಅಟಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಟ್ರಕ್ ಹಾಗೂ ಅದರ ಚಾಲಕನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular