ಜೆಡಿಎಸ್ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಪರವಾಗ ಅಡ್ಡ ಮತದಾನ ಮಾಡಿದ್ದ 7 ಜೆಡಿಎಸ್ ಸದಸ್ಯರು ಅನರ್ಹಗೊಂಡಿದ್ದಾರೆ. ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವಿಜಯಪುರ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತದಾನ ಮಾಡಿದ್ದ ಜೆಡಿಎಸ್ ಸದಸ್ಯರ ವಿರುದ್ಧ ದೂರು ನೀಡಲಾಗಿತ್ತು.
ದೂರನ್ನು ಪರಿಶೀಲನೆ ಮಾಡಿದ ಜಿಲ್ಲಾ ಚುನಾವಣಾಧಿಕಾರಿಗಳು ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ 7 ಪುರಸಭಾ ಸದಸ್ಯರನ್ನು ಅನರ್ಹಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ.
ಪಕ್ಷದ ವಿಪ್ ಉಲ್ಲಂಘನೆ, ಅಡ್ಡಮತದಾನ ಮಾಡಿದ್ದ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.
ನೆಲಮಂಗಲದಲ್ಲೂ ಅನರ್ಹ: ದಿನಾಂಕ 13.02.2025 ರಂದು ನಡೆದ ನೆಲಮಂಗಲ ನಗರಸಭೆ ಅಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷವು ಜಾರಿಗೊಳಿಸಿದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತದಾನ ಮಾಡಿದ ಹಿನ್ನೆಲೆಯಲ್ಲಿ 7 ಸದಸ್ಯರು ಅನರ್ಹಗೊಂಡಿದ್ದರು.
ಪಕ್ಷದ ವತಿಯಿಂದ ಸಲ್ಲಿಸಲಾದ ದೂರನ್ನು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರು ಕ್ರಮ ಕೈಗೊಂಡು 7 ಮಂದಿ ನಗರಸಭೆಯ ಸದಸ್ಯರನ್ನು ಅನರ್ಹರಗೊಳಿಸಿ ಆದೇಶಿಸಿದ್ದರು.

