HomeLatest NewsBIG BREAKING : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, 18 ಮಂದಿ ಸಜೀವ ದಹನ.!

BIG BREAKING : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, 18 ಮಂದಿ ಸಜೀವ ದಹನ.!

ಆಂಧ್ರಪ್ರದೇಶ :  ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೇಟ್ಲಪಾಲೆಂನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ.

ಬೆಂಕಿಯ ಜ್ವಾಲೆಯಲ್ಲಿ ಹಲವು ಕಾರ್ಮಿಕರು ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಘಟನೆಯ ವಿವರಗಳು: ಪ್ರಮಾದ ನಡೆದ ಸಮಯದಲ್ಲಿ ಸ್ಥಳದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸೇರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಆಂಬ್ಯುಲೆನ್ಸ್‌ಗಳ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರವಾಗಿ ಸುಟ್ಟ ಗಾಯಗಳಾಗಿರುವ ಹಲವರ ಪರಿಸ್ಥಿತಿ ವಿಷಮವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಟಾಕಿ ತಯಾರಿಸುತ್ತಿದ್ದಾಗ ಈ ಭಾರಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಸಮೀಪದ ಕಟ್ಟಡಗಳು ಕೂಡ ಧ್ವಂಸಗೊಂಡಿವೆ. ಅತಿಯಾದ ಸ್ಫೋಟದಿಂದಾಗಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಸಿಎಂ ಚಂದ್ರಬಾಬು ನಾಯ್ಡು ದಿಗ್ಭ್ರಮೆ: ವೇಟ್ಲಪಾಲೆಂ ಘಟನೆಯ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ತೆರಳುವಂತೆ ಗೃಹ ಸಚಿವೆ ಅನಿತಾ ಅವರಿಗೆ ಆದೇಶಿಸಿದ್ದಾರೆ. ಅಲ್ಲಿನ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆಯುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular