HomeInternationalWAR BREAKING: ಇಸ್ರೇಲ್-ಇರಾನ್ ಯುದ್ಧ: ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ವೈಮಾನಿಕ...

WAR BREAKING: ಇಸ್ರೇಲ್-ಇರಾನ್ ಯುದ್ಧ: ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ವೈಮಾನಿಕ ದಾಳಿ

ಬಹ್ರೇನ್: ಇರಾನ್ ರಾಜಧಾಅನಿ ಟೆಹ್ರಾಅನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ ಜಂಟಿಯಾಗಿ ದಾಳಿ ನಡೆಸಿರುವ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ದಾಳಿ ​ ನಡೆದಿದ್ದು, ಟೆಹರಾನ್​ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿದೆ. ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಇರಾನ್ ಸಂಭಾವ್ಯ ದಾಳಿಗೆ ಪ್ರತಿಕ್ರಿಯೆಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಸ್ರೇಲ್ ಹಾಗೂ ಅಮೆರಿಕಾ ನಡಿಸಿದ ದಾಳಿ ಬೆನ್ನಲ್ಲೇ ಇರಾನ್, ಇಸ್ರೇಲ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಕೆಲವೇ ಗಂಟೆಗಳ ಬಳಿಕ ಯುಎಇಯ ಅಬುಧಾಬಿ, ಕತಾರ್‌, ಬಹ್ರೇನ್, ಕುವೈತ್ ಮೇಲೆ ದಾಳಿ ನಡೆಸಿದೆ.

ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಇರಾನ್ ನಾನಾ ದೇಶಗಳಲ್ಲಿ ಇರುವ ಯುಎಸ್​ ವಾಯುನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸತೊಡಗಿದೆ. ಇದರಿಂದಾಗಿ ಬೇರೆ ದೇಶಗಳಲ್ಲೂ ಆತಂಕದ ವಾತಾವರಣ ಹೆಚ್ಚಾಗಿದೆ.

ಇಸ್ರೇಲ್ ಮೇಲೆ ಇರಾನ್ ಏಕಕಾಲದಲ್ಲಿ 125 ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ ಎಂದು ವರದಿಯಾಗಿದೆ. ಅವರಲ್ಲಿ ಕೆಲವರು ರಿಯಾದ್‌ನಿಂದ ಸುಮಾರು 60 ಕಿ.ಮೀ ದಕ್ಷಿಣದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯಲ್ಲಿ ನೆಲೆಸಿದ್ದಾರೆ. ಯುಎಇ ಸುತ್ತಮುತ್ತ ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ. ಇರಾನ್ ದಾಳಿಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದರ ನಡುವೆಯೇ ಕತಾರ್ ನಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಲೈಕವಾಗಿ ರದ್ದುಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular