HomeJobsಉದ್ಯೋಗ ಮೇಳ: ಸ್ಥಳ ದಲ್ಲೇ ಆಫರ್ ಲೆಟರ್  ಪಡೆದ 193 ಅಭ್ಯರ್ಥಿಗಳು

ಉದ್ಯೋಗ ಮೇಳ: ಸ್ಥಳ ದಲ್ಲೇ ಆಫರ್ ಲೆಟರ್  ಪಡೆದ 193 ಅಭ್ಯರ್ಥಿಗಳು

ಚಾಮರಾಜನಗರದಲ್ಲಿ ಆಯೋಜನೆ ಮಾಡಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಉದ್ಯೋಗ ಮೇಳದಲ್ಲಿ ಆಯ್ಕೆಯಾದ 193 ಅಭ್ಯರ್ಥಿಗಳಿಗೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ನೇಮಕಾತಿ ಪತ್ರ ವಿತರಣೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಇನ್ನಿತರ ಇಲಾಖೆ, ನಿಗಮ ಆಶ್ರಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆನ್‌ಲೈನ್‌ ಮೂಲಕ 668, ಆಫ್‌ಲೈನ್ ಮೂಲಕ 602 ಅಭ್ಯರ್ಥಿಗಳು ಸೇರಿದಂತೆ ಒಟ್ಟು 1,290 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 495 ಪುರುಷರು, 790 ಮಹಿಳೆಯರು ಸೇರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗ ಮೇಳದಲಿ 101 ಉದ್ಯೋಗದಾತ ಕಂಪನಿಗಳು ಭಾಗವಹಿಸಿದ್ದವು. 85 ಪುರುಷರು, 108 ಮಹಿಳೆಯರು ಸೇರಿದಂತೆ ಒಟ್ಟು 193 ಅಭ್ಯರ್ಥಿಗಳು ಸ್ಥಳದಲ್ಲಿಯೇ ಉದ್ಯೋಗಕ್ಕೆ ಆಯ್ಕೆಯಾದರು.

190 ಪುರುಷರು, 290 ಮಹಿಳೆಯರು ಸೇರಿದಂತೆ ಒಟ್ಟು 480 ಅಭ್ಯರ್ಥಿಗಳು ಉದ್ಯೋಗಕ್ಕಾಗಿ 2ನೇ ಹಂತದ (ಶಾರ್ಟ್ ಲಿಸ್ಟ್) ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಸಂಸದ ಸುನೀಲ್ ಬೋಸ್ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಸ್ಥಳದಲ್ಲಿಯೇ ಉದ್ಯೋಗಕ್ಕೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಉದ್ಯೋಗ ನೇಮಕ ಪತ್ರ ನೀಡಿ ಶುಭ ಹಾರೈಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು ಮಾತನಾಡಿ, “ಪ್ರತಿಯೊಬ್ಬರು ಸರ್ಕಾರಿ ಉದ್ಯೋಗ ಪಡೆಯಲು ಸಾಧ್ಯವಾಗುವುದಿಲ್ಲ. ಖಾಸಗಿ ಕ್ಷೇತ್ರಗಳಲ್ಲೂ ಸಾಕಷ್ಟು ಉತ್ತಮ ಉದ್ಯೋಗಗಳು ಇವೆ. ಅರ್ಹತೆಗೆ ತಕ್ಕ ಉದ್ಯೋಗ ಪಡೆಯಲು ನೆರವಾಗಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇನ್ನಿತರ ಇಲಾಖೆಗಳು ಸ್ಥಳೀಯವಾಗಿ ಉದ್ಯೋಗ ಮೇಳವನ್ನು ಏರ್ಪಡಿಸುತ್ತಿವೆ” ಎಂದರು.

“ಇಂತಹ ಅವಕಾಶವನ್ನು ಯುವಜನರು ಬಳಸಿಕೊಳ್ಳಬೇಕು. ಸ್ಥಳೀಯ ನಿರುದ್ಯೋಗಿ ಯುವಜನರು ಸ್ವಾವವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಉದ್ದೇಶದಿಂದ ಆಯೋಜಿಸಲಾಗುವ ಉದ್ಯೋಗ ಮೇಳ ದಂತಹ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಸಲಹೆ ಮಾಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular