ಟೆಹ್ರಾನ್: ಇಸ್ರೇಲ್-ಅಮೆರಿಕಾ ಇರಾನ್ ಮೇಲೆ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಇಡೀ ಕುಟುಂಬಕ್ಕೆ ಯುದ್ಧದಲ್ಲಿ ನಾಶವಾಗಿದೆ ಎಂದು ವರದಿಯಾಗಿದೆ.
ಇಸ್ರೇಲ್-ಅಮೆರಿಕಾ ದಾಳಿಯಲ್ಲಿಮ್ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಬಲಿಯಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ.
ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.
ಯುದ್ಧದಿಂದಾಗಿ ಮಧ್ಯಪ್ರಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದ್ದು, ಪಶ್ಚಿಮ ಏಷ್ಯಾ, ಗಲ್ಫ್ ಪ್ರದೇಶಗಳು ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ ಅಮೆರಿಕ-ಇಸ್ರೇಲಿ ದಾಳಿಗಳು, ಪ್ರಾದೇಶಿಕ ಪ್ರತೀಕಾರ ಮತ್ತು ಈಗ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಸಾವು ಇವೆಲ್ಲವೂ ಪರಿಸ್ಥಿತಿಯನ್ನು ಹದಗೆಡಿಸುತ್ತಿವೆ. ಇಡೀ ಜಗತ್ತನ್ನು ಅನಿಶ್ಚಿತ ಮತ್ತು ಅಪಾಯಕಾರಿ ಪರಿಸ್ಥಿತಿಗೆ ತಳ್ಳಿದಂತೆ ಕಾಣುತ್ತಿವೆ.
ಇಸ್ರೇಲ್, ಗಲ್ಫ್ ರಾಷ್ಟ್ರಗಳು ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಎಂಬ ವರದಿಯಾಗಿದೆ. ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.

