HomeLatest NewsBIG NEWS: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ...

BIG NEWS: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದಿದ್ದಾರೆ.

ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular