HomeSportsT20 World Cup 2026: ಟೂರ್ನಿಯ ಮೊದಲ ಸೆಮಿಫೈನಲ್ ಘೋಷಣೆ; ಸೋಲಿಲ್ಲದ ಸರದಾರ ದಕ್ಷಿಣ ಆಫ್ರಿಕಾಗೆ...

T20 World Cup 2026: ಟೂರ್ನಿಯ ಮೊದಲ ಸೆಮಿಫೈನಲ್ ಘೋಷಣೆ; ಸೋಲಿಲ್ಲದ ಸರದಾರ ದಕ್ಷಿಣ ಆಫ್ರಿಕಾಗೆ ಈ ತಂಡ ಎದುರಾಳಿ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ 2026ರ ಮೊದಲ ಸೆಮಿಫೈನಲ್ ಪಂದ್ಯ ಘೋಷಣೆಯಾಗಿದೆ. ಇಂದು ( ಮಾರ್ಚ್ 1 ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಪಂದ್ಯದ ಫಲಿತಾಂಶ ಹೊರಬಿದ್ದ ಬಳಿಕ ಮೊದಲ ಸೆಮಿಫೈನಲ್‌ನಲ್ಲಿ ಕಣಕ್ಕಿಳಿಯುವ ತಂಡಗಳು ಯಾವುವು ಎಂಬುದು ಬಹಿರಂಗವಾಗಿದೆ.

ಟೂರ್ನಿಯಲ್ಲಿ ಸೋಲನ್ನೇ ಕಾಣದ ದಕ್ಷಿಣ ಆಫ್ರಿಕಾ ಇಂದು ನಡೆದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 153 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ 154 ರನ್‌ಗಳ ಸಾಧಾರಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 17.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 154 ರನ್ ಕಲೆಹಾಕಿತು.

ಈ ಮೂಲಕ ದಕ್ಷಿಣ ಆಫ್ರಿಕಾ 6 ಅಂಕಗಳನ್ನು ಹೊಂದಿ ಗ್ರೂಪ್ ಒಂದರ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಖಾಯಂ ಮಾಡಿಕೊಂಡಿದೆ. ಗ್ರೂಪ್ ಒಂದರಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಗ್ರೂಪ್ ಎರಡರಲ್ಲಿ ಎರಡನೇ ಸ್ಥಾನದಲ್ಲಿರುವ ತಂಡದ ವಿರುದ್ಧ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಬುಧವಾರ ( ಮಾರ್ಚ್ 4 ) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ( ಗ್ರೂಪ್ ಒಂದರ ಟಾಪ್ ತಂಡ ) ಹಾಊ ನ್ಯೂಜಿಲೆಂಡ್ ( ಗ್ರೂಪ್ ಎರಡರಲ್ಲಿ ಎರಡನೇ ಸ್ಥಾನದಲ್ಲಿರುವ ತಂಡ ) ಮುಖಾಮುಖಿಯಾಗಲಿವೆ. ಸಂಜೆ 7 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular