HomeKarnataka'ಫೀಸ್' ಕಟ್ಟಿಲ್ಲವೆಂದು 'ದ್ವಿತೀಯ PUC' ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಸಸ್ಪೆಂಡ್.!

‘ಫೀಸ್’ ಕಟ್ಟಿಲ್ಲವೆಂದು ‘ದ್ವಿತೀಯ PUC’ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಸಸ್ಪೆಂಡ್.!

ಹಾವೇರಿ :   ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಹಾಲ್ ಟಿಕೆಟ್ ನೀಡದೆ ಸತಾಯಿಸಿ, ಅಮಾನವೀಯವಾಗಿ ವರ್ತಿಸಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ರಾಣೇಬೆನ್ನೂರಿನ ಬಿಎಜೆಎಸ್‌ಎಸ್ (BAJSS) ಕಾಲೇಜಿನ ವಿದ್ಯಾರ್ಥಿನಿ  ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ಫೆಬ್ರವರಿ 28ರಂದು ಕನ್ನಡ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯ ವಿಜ್ಞಾನ ಶಿಕ್ಷಕಿ ಸುನೀತಾ ಡಿ.ಬಿ. ಅವರು ಕಾಲೇಜು ಆಡಳಿತ ಮಂಡಳಿಯ ಪರವಾಗಿ ನಿಂತು ವಿದ್ಯಾರ್ಥಿನಿಯನ್ನು ತಡೆದಿದ್ದರು. 30 ಸಾವಿರ ರೂ. ಪೀಸ್ ಬಾಕಿ ಇದೆ ಎಂಬ ಕಾರಣಕ್ಕೆ ಹಾಲ್ ಟಿಕೆಟ್ ನೀಡದೆ, “ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ (ಉಚಿತವಾಗಿ) ಕಲಿಸ್ತಾರಾ?” ಎಂದು ಉದ್ಧಟತನದ ಮಾತುಗಳನ್ನಾಡಿದ್ದರು.

ಹೋರಾಟ: ಸಾಮಾಜಿಕ ಹೋರಾಟಗಾರ ಹನುಮಂತಪ್ಪ ಅವರು ವಿದ್ಯಾರ್ಥಿನಿಯ ಪರವಾಗಿ ಧ್ವನಿ ಎತ್ತಿ, ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪೋಷಕರು ಬೈಕ್ ಅಡಮಾನ ಇಟ್ಟ ನಂತರವಷ್ಟೇ ಹಾಲ್ ಟಿಕೆಟ್ ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲಾಖೆಯ ಕ್ರಮ: ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ   ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ ದಂಡಿನ ಅವರು ತನಿಖೆ ನಡೆಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಕರ್ತವ್ಯ ಲೋಪ ಹಾಗೂ ವಿದ್ಯಾರ್ಥಿನಿಯ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಆರೋಪದ ಮೇಲೆ ಶಿಕ್ಷಕಿ ಸುನೀತಾ ಡಿ.ಬಿ. ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಪಣಕ್ಕಿಡಬಾರದು ಎಂಬ ಆಕ್ರೋಶ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular