HomeAgricultureತೂಕದಲ್ಲಿ ವ್ಯತ್ಯಾಸ ದೂರು: ರಾಗಿ ಖರೀದಿ ಕೇಂದ್ರಕ್ಕೆ ಹಾಸನ ಡಿಸಿ ದಿಢೀರ್ ಭೇಟಿ

ತೂಕದಲ್ಲಿ ವ್ಯತ್ಯಾಸ ದೂರು: ರಾಗಿ ಖರೀದಿ ಕೇಂದ್ರಕ್ಕೆ ಹಾಸನ ಡಿಸಿ ದಿಢೀರ್ ಭೇಟಿ

ಹಾಸನ ನಗರದ ಎಪಿಎಂಸಿ ಆವರಣದಲ್ಲಿರುವ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ದಿಢೀರ್ ಭೇಟಿ ರಾಗಿ ಖರೀದಿಯ ಗುಣಮಟ್ಟದ ಪರಿಶೀಲಿಸಿದರು.

ಜಿಲ್ಲಾಧಿಕಾರಿಗಳು ಮಾತನಾಡಿದ, “ಜಿಲ್ಲೆಯಲ್ಲಿ 26 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ, ಆಲೂರು ಹಾಗೂ ಸಕಲೇಶಪುರ ಕೇಂದ್ರ ಹೊರತು ಪಡಿಸಿ ಇತರೆ ಎಲ್ಲಾ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ” ಎಂದರು.

“ಅರಸೀಕೆರೆ ತಾಲ್ಲೂಕಿನಲ್ಲಿ 10 ಕೇಂದ್ರಗಳು ಹಾಗೂ ಇತರೆ ತಾಲ್ಲೂಕುಗಳಲ್ಲಿ 2-3 ತೆರಿಯಲಾಗಿದೆ. ತಿಂಗಳ ಕೊನೆಯವರೆಗೂ ಖರೀದಿ ಮಾಡಲಾಗುತ್ತದೆ. ರಾಗಿಯ ಖರೀದಿ ತೂಕದಲ್ಲಿ ವ್ಯತ್ಯಾಸವಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಇಂದು ಹಾಸನ ತಾಲ್ಲೂಕಿನ ಖರೀದಿ ಕೇಂದ್ರ ಭೇಟಿ ನೀಡಿ ಪರಿಶೀಲಾಯಿತು” ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ರಾಗಿಯನ್ನು ಸ್ವಚ್ಚಗೊಳಿಸುವ ವೇಸ್ಟೇಜ್‌ನ ಪ್ರಮಾಣ ಹೆಚ್ಚು ಬರುತ್ತಿದೆ ಎಂದು ರೈತರಿಂದ ದೂರುಗಳು ಬಂದಿದ್ದು, 2 ಭಾರಿ ಸ್ವಚ್ಚತೆಯನ್ನು ಮಾಡಲು ಸೂಚನೆಯನ್ನು ನೀಡಲಾಗಿದೆ ಹಾಗೂ ಹಮಾಲಿಗಳಿಂದ ಹೆಚ್ಚಿನ ಹಣ ಬೇಡಿಕೆ ಇತ್ತು ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಲಾಗಿದೆ” ಎಂದು ತಿಳಿಸಿದರು.

“ತೂಕ ಹಾಗೂ ಗುಣಮಟ್ಟದಲ್ಲಿ ಖರೀದಿ ಮಾಡುವ ಉದ್ದೇಶದಿಂದ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ, ಎಪಿಎಂಸಿ ಕಾರ್ಯದರ್ಶಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಶಿರೇಸ್ತೆದ್ದಾರ್, ಉಪ ತಹಶೀಲ್ದಾರ್‌ರರು ಒಳಗೊಂಡ ಸಮಿತಿಯನ್ನು ಮಾಡಲಾಗಿದೆ ಮೇಲುಸ್ತುವಾರಿ ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

“ಪ್ರತಿ ಕೇಂದ್ರದಲ್ಲಿ ಯಾವುದೇ ರೈತರಿಗೆ ತೊಂದರೆಯಾಗದಂತೆ ಮೋಸ ಆಗದಂತೆ, ಅಕ್ರಮಗಳು ನಡೆಯದಂತೆ ಪಾರದರ್ಶಕತೆಯಿಂದ ನಡೆಸಲು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ” ಎಂದರು.

“ವಾಹನಗಳ ಮೂಲಕ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮುಗಳಲ್ಲಿ ಶೇಖರಿಸಿಡಲಾಗುತ್ತದೆ, ಗೋದಾಮುಗಳಿಗೆ ಸಾಗಣಿಕೆ ಮಾಡುವ ವಾಹನಕ್ಕೆ ಜಿ.ಪಿ.ಎಸ್ ಅಳವಡಿಸಲಾಗಿದೆ ಹಾಗೂ ಲಾರಿಗಳ ಸಂಖ್ಯೆಯನ್ನು ಹೆಚ್ಚು ಮಾಡಲು ಸಂಬಂಧಪಟ್ಟ ಏಜೆನ್ಸಿಯವರಿಗೆ ತಿಳಿಸಲಾಗಿದೆ” ಎಂದು ವಿವರಣೆ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular