HomeKarnatakaಹೋಳಿ ಹಬ್ಬ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಹೋಳಿ ಹಬ್ಬ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಕೊಪ್ಪಳ: ಹೋಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮಾರ್ಚ್ 4ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಮಾರ್ಚ್ 3 ರಿಂದ 4ರ ವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಕಾಮದಹನ ಮತ್ತು ಹೋಳಿ ಹಬ್ಬದ ಸಮಯದಲ್ಲಿ ಶಾಂತತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಿಗೊಳಪಟ್ಟಂತೆ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂಬ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆ ಮೇರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21 ರನ್ವಯ ಕೊಪ್ಪಳ ಜಿಲ್ಲೆಯ ಅಳವಂಡಿ, ಹನುಮಸಾಗರ ಮತ್ತು ಯಲಬುರ್ಗಾ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾ. 2ರ ಸಂಜೆ 6 ಗಂಟೆಯಿಂದ ಮಾ. 3ರ ಮಧ್ಯರಾತ್ರಿಯವರೆಗೆ ಮದ್ಯಮಾರಾಟವನ್ನು ನಿಷೇಧಿಸಿದೆ. ಅದೇ ರೀತಿ ಈ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿ ಹೊರತುಪಡಿಸಿ ಕೊಪ್ಪಳ ಜಿಲ್ಲೆಯಾದ್ಯಂತ ಮಾ. 3ರ ಸಂಜೆ 6 ಗಂಟೆಯಿಂದ ಮಾ. 4ರ ಮಧ್ಯರಾತ್ರಿಯವರೆಗೆ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ.

 ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಈ ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular