HomeLatest News100 ಕಂಪನಿಗಳಲ್ಲಿ 10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ: ಮಾ. 7 ರಂದು ಸ್ಥಳದಲ್ಲೇ ನೇಮಕಾತಿ ಆದೇಶ

100 ಕಂಪನಿಗಳಲ್ಲಿ 10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ: ಮಾ. 7 ರಂದು ಸ್ಥಳದಲ್ಲೇ ನೇಮಕಾತಿ ಆದೇಶ

ಹಾಸನ: ಮಾರ್ಚ್ 07 ರಂದು ಯುವ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು, ನಿರುದ್ಯೋಗ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಅವರು ಕರೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ಮೇಳದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜ್ ಆವರಣದಲ್ಲಿ ಯುವ ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, 100 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಯುವಕ ಯುವತಿಯರಿಗೆ ನೇರ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ, ವಿದ್ಯಾಭ್ಯಾಸ ಮಾಡಿರುವ ಅಂಕಪಟ್ಟಿಗಳು ಹಾಗೂ ಸ್ವ ವಿವರದೊಂದಿಗೆ ಆಗಮಿಸಿ ಅಥವಾ ಆನ್ ಲೈನ್ ಮೂಲಕ ಮುಂಚಿತವಾಗಿ ನೊಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆಯನ್ನು ಮಾಡಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ ಅಥವಾ ಯಾವುದೇ ಪದವಿ ಐಟಿಐ ಡಿಪ್ಲೋಮಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು, ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸ್ಥಳದಲ್ಲಿಯೇ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಭಾಗವಹಿಸಬಹುದು, ಕೌಂಟರ್ ಗಳನ್ನು ತೆರೆಯಲಾಗುವುದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನೋಂದಣಿ ನಡೆಯಲಿದೆ ಎಂದರು.

ಕಂಪನಿಯಲ್ಲಿ ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳುವ ವೇಳೆಯಲ್ಲಿ ಅಭ್ಯರ್ಥಿಯ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ತರಬೇತಿಯನ್ನು ನೀಡುತ್ತೇವೆ ಎಂದು ಕಂಪನಿಯವರು ತಿಳಿಸಿದ್ದಾರೆ, 100 ಕಂಪನಿಗಳಲ್ಲಿ 10000 ಉದ್ಯೋಗವಕಾಶವಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರು ಇದೊಂದು ಸುವರ್ಣ ಅವಕಾಶವಿದ್ದಂತೆ ಈ ಸದುಪಯೋಗವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಆಗಮಿಸುವ ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular