ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಬೆಂಗಳೂರಿನ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ಘಟನೆ ನಡೆದಿದೆ.
ಚಾಕು ಮತ್ತು ಡ್ರ್ಯಾಗರ್ ನಿಂದ ಇರಿದು ಶಶಿಕುಮಾರ್ ಎಂಬವರನ್ನು ಕೊಲೆ ಮಾಡಲಾಗಿದೆ. ಶಶಿಕುಮಾರ್ ರಾತ್ರಿ ಊಟ ಮಾಡಲು ಹೋಟೆಲ್ ಗೆ ಆಗಮಿಸಿದ್ದರು. ನಿನ್ನೆ ರಾತ್ರಿ 11.30 ಕ್ಕೆ ಶಶಿಕುಮಾರ್ ಹೋಟೆಲ್ ಗೆ ಬಂದಾಗ ಗಲಾಟೆಯಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಶಶಿಕುಮಾರ್ ಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ.
ಹೋಟೆಲ್ ಸಮೀಪ ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿದೆಯೇ ಅಥವಾ ಹಳೆ ವೈಷಮ್ಯದಿಂದ ಕೊಲೆ ಮಾಡಲಾಗಿದೆಯೇ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬಸವೇಶ್ವರನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

