HomeJobsಮಾರ್ಚ್ 6ರಂದು ಕೊಪ್ಪಳದಲ್ಲಿ ವಾಕ್ ಇನ್ ಸಂದರ್ಶನ

ಮಾರ್ಚ್ 6ರಂದು ಕೊಪ್ಪಳದಲ್ಲಿ ವಾಕ್ ಇನ್ ಸಂದರ್ಶನ

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಾರ್ಚ್‌ 6ರಂದು  ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಈ ವಾಕ್ ಇನ್ ಸಂದರ್ಶನ ನಡೆಯಲಿದೆ.

ಮಾರ್ಚ್ 6ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ ತನಕ  ಈ ವಾಕ್ ಇನ್ ಇಂಟರ್‌ವ್ಯೂವ್‌ ನಡೆಯಲಿದೆ. ಮೆಡ್‌ಫ್ಲಸ್ ಬೆಂಗಳೂರು ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ನಡೆಸಿ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಹುದ್ದೆಗಳು ಫಾರ್ಮ್ಸಿಸ್ಟ್ (ರಜಿಸ್ರ‍್ಡ್ ಫಾರ್ಮ್ಸಿಸ್ಟ್ ಕೆಎಸ್‌ಪಿಸಿ ಇಂದ), ಫಾರ್ಮ್ಸಿಯೇಡ್ (ಕನಿಷ್ಟ 2 ವರ್ಷ ಮೆಡಿಕಲ್ ಶಾಫ್‌ನಲ್ಲಿ ಅನುಭವ), ಕಸ್ಟಮರ್ ಸರ್ವೀಸ್ ಅಸೋಶಿಯೇಟ್‌ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್.ಸಿ, ಪಿಯುಸಿ, ಡಿ-ಫಾರ್ಮ್, ಬಿ-ಫಾರ್ಮ್ ಇತರೆ ಪದವಿ (ಬಿಇ ಪದವಿ ಹೊರತು ಪಡಿಸಿ) ಅಭ್ಯರ್ಥಿಗಳು ನೇರ ಈ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ಆಸಕ್ತ 18 ರಿಂದ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್‌ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವು ಪಡೆಯಬಹುದಾಗಿದೆ.

ಉದ್ಯೋಕಾಂಕ್ಷಿಗಳು https://forms.gle/rSKrLmuqyH8RFgo29 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular