HomeLatest NewsBIG NEWS : ಮಾ. 11 ರಿಂದ ರಾಜ್ಯಾದ್ಯಂತ ಸರ್ಕಾರಿ ವೈದ್ಯರು, ಸಿಬ್ಬಂದಿಗಳ ನೌಕರರ ಮುಷ್ಕರ...

BIG NEWS : ಮಾ. 11 ರಿಂದ ರಾಜ್ಯಾದ್ಯಂತ ಸರ್ಕಾರಿ ವೈದ್ಯರು, ಸಿಬ್ಬಂದಿಗಳ ನೌಕರರ ಮುಷ್ಕರ ಫಿಕ್ಸ್ , ಆರೋಗ್ಯ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು: ರಾಜ್ಯದ ಸರ್ಕಾರಿ ಆರೋಗ್ಯ ನೌಕರರು ಹೂಡಿರುವ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯು ಯಾವುದೇ ತಾರ್ಕಿಕ ಅಂತ್ಯ ಕಾಣದೆ ವಿಫಲಗೊಂಡಿದೆ.

ಸರ್ಕಾರದ ಭರವಸೆಗಳಿಂದ ಅತೃಪ್ತರಾಗಿರುವ ನೌಕರರ ಸಂಘಟನೆಗಳು, ಪೂರ್ವನಿರ್ಧರಿತ ಯೋಜನೆಯಂತೆ ಮಾರ್ಚ್ 11 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಅಂತಿಮ ನಿರ್ಧಾರ ಪ್ರಕಟಿಸಿವೆ. ಇದರಿಂದಾಗಿ ಮುಂದಿನ ವಾರದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಸಂಪೂರ್ಣ ವ್ಯತ್ಯಯಗೊಳ್ಳುವ ಭೀತಿ ಎದುರಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆರೋಗ್ಯ ನೌಕರರು ಎರಡು ಹಂತಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮೊದಲ ಹಂತ (ಮಾ. 11 ರಿಂದ): ಮಾರ್ಚ್ 11 ರಿಂದ ಸತತ 5 ದಿನಗಳ ಕಾಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ (OPD) ಸೇವೆಗಳು ಸಂಪೂರ್ಣವಾಗಿ ಬಂದ್ ಆಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ಹಂತ (ಮಾ. 16 ರಿಂದ): ಒಂದು ವೇಳೆ ಸರ್ಕಾರ ಅಷ್ಟರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮಾರ್ಚ್ 16 ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ.

ಯಾವ ಸೇವೆ ಲಭ್ಯ?: ಮುಷ್ಕರದ ಅವಧಿಯಲ್ಲಿ ಕೇವಲ ತುರ್ತು ಸೇವೆಗಳು (Emergency Services) ಮಾತ್ರ ಲಭ್ಯವಿರಲಿವೆ ಎಂದು ನೌಕರರ ಸಂಘಟನೆಗಳು ತಿಳಿಸಿವೆ.

ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ತೊಂದರೆಯಾಗುವ ಆತಂಕ ಎದುರಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular