HomeIndiaಮಧ್ಯಪ್ರಾಚ್ಯದ ಪರಿಸ್ಥಿತಿ: ಭಾರತದ ವಿಮಾನ ಕಾರ್ಯಾಚರಣೆ ಅಪ್‌ ಡೇಟ್

ಮಧ್ಯಪ್ರಾಚ್ಯದ ಪರಿಸ್ಥಿತಿ: ಭಾರತದ ವಿಮಾನ ಕಾರ್ಯಾಚರಣೆ ಅಪ್‌ ಡೇಟ್

ಇಸ್ರೇಲ್–ಇರಾನ್ ನಡುವಣ ಉದ್ವಿಗ್ನ ಪರಿಸ್ಥಿತಿ ಕಾರಣಕ್ಕೆ ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಬದಲಾಗುತ್ತಿರುವ ವೈಮಾನಿಕ ಪರಿಸ್ಥಿತಿ ಮತ್ತು ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳ ಮೇಲೆ ಅದರ ಪ್ರಭಾವವನ್ನು ಭಾರತದ ನಾಗರಿಕ ವಿಮಾನಯಾನ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಭಾರತೀಯ ವಿಮಾನಯಾನ ಸಂಸ್ಥೆಗಳು ತಮ್ಮ ವೇಳಾಪಟ್ಟಿಗಳಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಿಕೊಂಡಿವೆ. ನಿರ್ಬಂಧಿತ ವೈಮಾನಿಕ ಪ್ರದೇಶಗಳನ್ನು ಹೊರತುಪಡಿಸಿ, ಪರ್ಯಾಯ ಮಾರ್ಗಗಳ ಮೂಲಕ ಸುದೀರ್ಘ ಪ್ರಯಾಣದ ಕಾರ್ಯಾಚರಣೆಗಳನ್ನು ಹಂತಹಂತವಾಗಿ ಪುನರಾರಂಭಿಸಲಾಗುತ್ತಿದೆ.

ಕಾರ್ಯಾಚರಣೆಯ ಆದಷ್ಟು ಬೇಗ ಪುನಸ್ಥಾಪಿಸಲು ವಿಮಾನಗಳು ಮತ್ತು ಸಿಬ್ಬಂದಿ ಮರುನಿಯೋಜನೆ ಕ್ರಮಗಳು ನಡೆಯುತ್ತಿವೆ. ವಿವಿಧ ದೇಶದಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನಯಾನ ಸಂಸ್ಥೆಗಳು ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ವಿಮಾನಗಳನ್ನು ನಿಯೋಜಿಸುತ್ತಿವೆ ಮತ್ತು ಪ್ರಯಾಣಿಕರ ಸುರಕ್ಷಿತ ಹಾಗೂ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ವಿದೇಶಿ ವಿಮಾನಯಾನ ಪ್ರಾಧಿಕಾರಗಳು ಮತ್ತು ವಿದೇಶಗಳಲ್ಲಿರುವ ಭಾರತೀಯ ಮಿಷನ್‌ಗಳೊಂದಿಗೆ ನಿಕಟ ಸಂಪರ್ಕದಲ್ಲಿವೆ.

ಅಗತ್ಯ ಅನುಮತಿ ಮತ್ತು ಅಂದಿನ ವೈಮಾನಿಕ ಪರಿಸ್ಥಿತಿಗೆ ಒಳಪಟ್ಟು, ಸಿಲುಕಿಕೊಂಡಿರುವ ಪ್ರಯಾಣಿಕರ ವಾಪಸಾತಿಗಾಗಿ ಇಂಡಿಗೋ ಸಂಸ್ಥೆಯು 2026ರ ಮಾರ್ಚ್ 3 ರಂದು ಜೆಡ್ಡಾದಿಂದ ಭಾರತಕ್ಕೆ 10 ವಿಶೇಷ ವಿಮಾನ ಕಾರ್ಯಾಚರಣೆಗಳನ್ನು ಮಾಡಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಇಂಡಿಗೋ ಸಂಸ್ಥೆ ಜೆಡ್ಡಾದಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ.

ಭಾರತ ಮತ್ತು ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ವಿದೇಶಿ ವಿಮಾನಯಾನ ಸಂಸ್ಥೆಗಳು ಸಹ ಕಾರ್ಯಾಚರಣೆ ಮತ್ತು ವೈಮಾನಿಕ ವಲಯದ ಪರಿಸ್ಥಿತಿಗಳಿಗೆ ಒಳಪಟ್ಟು ಸೀಮಿತ ಕಾರ್ಯಾಚರಣೆಗಳನ್ನು ನಡೆಸುತ್ತಿವೆ.

ಪ್ರಯಾಣಿಕರ ಸುರಕ್ಷತೆಯೇ ಅತ್ಯಂತ ಪ್ರಮುಖವಾಗಿದೆ. ಪ್ರಯಾಣಿಕರೊಂದಿಗೆ ಸಂವಹನ ನಡೆಸಲಾಗುತ್ತಿದೆ ಮತ್ತು ಮರುಪಾವತಿ, ಮರು ಹೊಂದಾಣಿಕೆ ಹಾಗೂ ಪ್ರಯಾಣಿಕರ ಸಹಾಯಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸುವಂತೆ ಭಾರತ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದೆ.

ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ವಿಮಾನದ ಇತ್ತೀಚಿನ ಸ್ಥಿತಿಯನ್ನು ನೇರವಾಗಿ ಆಯಾ ವಿಮಾನಯಾನ ಸಂಸ್ಥೆಗಳ ಮೂಲಕ ಪರಿಶೀಲಿಸಲು ಮತ್ತು ಅಪ್‌ಡೇಟ್‌ ಗಳಿಗಾಗಿ ಅಧಿಕೃತ ಮೂಲಗಳನ್ನು ಮಾತ್ರ ನಂಬಬೇಕು ಎಂದು ಸಲಹೆ ನೀಡಲಾಗಿದೆ.

ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಸಭೆಯಲ್ಲಿ ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಮತ್ತು ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುರಕ್ಷಿತ ಕಾರ್ಯಾಚರಣೆ, ಸೇವೆಗಳ ವ್ಯವಸ್ಥಿತ ಪುನಸ್ಥಾಪನೆ ಮತ್ತು ಸಂಕಷ್ಟಕ್ಕೀಡಾದ ಪ್ರಯಾಣಿಕರಿಗೆ ನೆರವು ನೀಡಲು ಸಚಿವಾಲಯವು ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು, ನಿಯಂತ್ರಕ ಪ್ರಾಧಿಕಾರಗಳು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular