ಕಲಬುರಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ಎಫ್ಐಆರ್ ರದ್ದತಿ ಕೋರಿ ಯಾದಗಿರಿ ಜಿಲ್ಲೆ, ಮಹಾಲಾರೋಜ ಮಠದ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಸಲ್ಲಿಸಿದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.
ತಮ್ಮ ವಿರುದ್ಧ ದುರುದ್ದೇಶದಿಂದ ಲೈಂಗಿಕ ಕಿರುಕುಳ ದೂರು ದಾಖಲಿಸಲಾಗಿದೆ. ಹೀಗಾಗಿ ಎಫ್ಐಆರ್ ರದ್ದುಗೊಳಿಸುವಂತೆ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿಯ ಹೈಕೋರ್ಟ್ ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಅರ್ಜಿ ವಿಚಾರಣೆಯ ವೇಳೆ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಹೆಚ್ಚುವರಿ ಸರ್ಕಾರಿ ಅಭಿಯೋಜಕ ಸಿದ್ದಲಿಂಗಪ್ಪ ಪಾಟೀಲ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.

