ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾರ್ಚ್ 7ರಂದು ಮಧ್ಯಾಹ್ನ 12ಗಂಟೆಯೊಳಗೆ ಸಲ್ಲಿಸಬೇಕು. ಈ ಕೆಳಗಿನ ಲಿಂಕ್ ಮೂಲಕವೇ ಸಲ್ಲಿಸಬೇಕು. https://cetonline.karnataka.gov.in/kea/
ಅರ್ಜಿ ಸಲ್ಲಿಸಿದ್ದ ಒಟ್ಟು 2.31 ಲಕ್ಷ ಮಂದಿ ಪೈಕಿ ಶೇ.98ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್.ಅಂಬೇಡ್ಕರ್ /ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿ ರನ್ನ / ಗಾಂಧಿ ತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿಯ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ https://cetonline.karnataka.gov.in/kea/25:07.03.20265 ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ನಿಗದಿತ ಅವಧಿಯೊಳಗೆ ಮೇಲ್ಕಂಡ ಮಾಹಿತಿಗಳನ್ನು ಸಲ್ಲಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ.

