HomeLive NewsBREAKING : ಖಮೇನಿ  ಹತ್ಯೆ ಬಗ್ಗೆ ಸ್ಟೇಟಸ್ ಹಾಕಿದ್ದಕ್ಕೆ ಕೊಪ್ಪಳದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ.!

BREAKING : ಖಮೇನಿ  ಹತ್ಯೆ ಬಗ್ಗೆ ಸ್ಟೇಟಸ್ ಹಾಕಿದ್ದಕ್ಕೆ ಕೊಪ್ಪಳದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ.!

ಕೊಪ್ಪಳ :   ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ವಿಚಾರ ಈಗ ಕರ್ನಾಟಕದ ಕೊಪ್ಪಳದಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ. ಖಮೇನಿ ಸಾವಿನ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಆಕ್ರೋಶಗೊಂಡ ಅನ್ಯಕೋಮಿನ ಯುವಕರ ಗುಂಪೊಂದು ಹಿಂದೂ ಯುವಕನ ಮೇಲೆ ಭೀಕರ ಹಲ್ಲೆ ನಡೆಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ (Status) ಹಾಕಿದ್ದಕ್ಕಾಗಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಈತ ಖರ್ಜೂರದ ವ್ಯಾಪಾರಿಯಾಗಿದ್ದಾನೆ.ಅಮೆರಿಕ ಮತ್ತು ಇಸ್ರೇಲ್ ದಾಳಿಯಲ್ಲಿ ಅಲಿ ಖಮೇನಿ ಸಾವನ್ನಪ್ಪಿದ ಕುರಿತು ಚಂದ್ರಶೇಖರ್ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸ್ಟೋರಿ ಹಂಚಿಕೊಂಡಿದ್ದನು.ಈ ಸ್ಟೋರಿಯಿಂದ ಆಕ್ರೋಶಗೊಂಡ ಐದಾರು ಮಂದಿ ಯುವಕರು, ಚಂದ್ರಶೇಖರ್ ವ್ಯಾಪಾರ ಮಾಡುತ್ತಿದ್ದ ಸ್ಥಳಕ್ಕೆ ಬಂದು “ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ, ನಮಗೆ ನೋವಾಗಿದೆ” ಎಂದು ಕಿರುಚಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲ್ಲೆ ಮಾಡಿದ್ದಲ್ಲದೆ, ಮನೆಗೆ ನುಗ್ಗಿ ಹೊಡೆಯುವುದಾಗಿ ಮತ್ತು ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಭಯಭೀತನಾದ ಚಂದ್ರಶೇಖರ್ ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾನೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular