HomeIndiaಡಿಕೆಶಿ ಉಸ್ತುವಾರಿ: ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಅಭ್ಯರ್ಥಿಗಳ ಪಟ್ಟಿ ರಿಲೀಸ್!

ಡಿಕೆಶಿ ಉಸ್ತುವಾರಿ: ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಅಭ್ಯರ್ಥಿಗಳ ಪಟ್ಟಿ ರಿಲೀಸ್!

ಅಸ್ಸಾಂ ವಿಧಾನಸಭೆ ಚುನಾವಣೆ 2026ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಹಾಲಿ ವಿಧಾನಸಭೆ ಅವಧಿ ಮೇ 20ರಂದು ಮುಕ್ತಾಯವಾಗಲಿದ್ದು, ಅದಕ್ಕೂ ಮೊದಲು ಚುನಾವಣೆ ನಡೆಯಬೇಕಿದೆ. 123 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 75.

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಸಂಸದ ಮತ್ತು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಜೋರ್ಹತ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದೇಬಬ್ರತ ಸೈಕಿಯಾ ನಜೀರಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಿಪುನ್ ಬೋರಾ ಬರಾಚಲ್ಲವ್ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2016ರಿಂದ ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು ಎಂಬುದು ಪಕ್ಷದ ತಂತ್ರವಾಗಿದೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದ್ದು, ಬಿಜೆಪಿಯ ಹಿಮಂತ ಬಿಸ್ವಾ ಶರ್ಮಾ ಮುಖ್ಯಮಂತ್ರಿ.

ಡಿ.ಕೆ.ಶಿವಕುಮಾರ್ ಭೇಟಿ: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಉಸ್ತುವಾರಿಯಾಗಿದ್ದಾರೆ. ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷೆ ಪ್ರಿಯಾಂಕಾ ವಾದ್ರಾ ಜೊತೆ ಡಿ.ಕೆ.ಶಿವಕುಮಾರ್ ಎರಡು ವಾರದ ಹಿಂದೆ ಅಸ್ಸಾಂಗೆ ಭೇಟಿ ನೀಡಿ, ಸರಣಿ ಸಭೆಗಳನ್ನು ನಡೆಸಿದ್ದರು.

ಈ ಸಭೆಗಳ ಬಳಿಕ ರಾಜ್ಯ ಘಟಕದಿಂದ ಬಂದಿರುವ ಶಿಫಾರಸುಗಳನ್ನು ಪರಿಶೀಲನೆ ನಡೆಸಿದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಜೆಪಿ ಇನ್ನೂ ಸಹ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular