HomeKarnataka'ಗೃಹಲಕ್ಷ್ಮಿ'ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ

‘ಗೃಹಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಮಾಸಿಕ ತಲಾ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತಿದೆ.

ಈ ಯೋಜನೆ ಫಲಾನುಭವಿ ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ನೀಡುವ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಹಕಾರ ಸಂಘಗಳ ಮೂಲಕ ಸೀರೆ ವಿತರಣೆ ಮಾಡುವ ಯೋಜನೆ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಇದರೊಂದಿಗೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಆಹಾರ ಕಿಟ್ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular