ಬೆಂಗಳೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ್ಮ (96) ಅವರು ಇಂದು (ಮಾರ್ಚ್ 5, 2026) ನಿಧನರಾಗಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದಲ್ಲಿ ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಹಾದೇವಮ್ಮ ಅವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ 12 ಗಂಟೆಗೆ ಅವರ ಸ್ವಗ್ರಾಮವಾದ ಚಿಕ್ಕಮುದುವಾಡಿಯಲ್ಲಿ ನಡೆಯಲಿದೆ.ಈ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಲಿದ್ದಾರೆ. ಸಹೋದರಿಯ ಅಗಲಿಕೆಗೆ ಸಚಿವ ವಿ. ಸೋಮಣ್ಣ ಹಾಗೂ ಅವರ ಕುಟುಂಬಕ್ಕೆ ಅಭಿಮಾನಿಗಳು ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಸಚಿವ ವಿ ಸೋಮಣ್ಣ ಟ್ವೀಟ್
ನನ್ನ ಹಿರಿಯ ಸಹೋದರಿ, ದಿವಂಗತ ಶ್ರೀ ವಿ. ಮುದ್ದಯ್ಯನವರ ಧರ್ಮಪತ್ನಿ ಶ್ರೀಮತಿ ಮಹದೇವಮ್ಮ(96ವರ್ಷ) ಇಂದು ಚಿಕ್ಕಮುದುವಾಡಿ ಗ್ರಾಮ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆಯಲ್ಲಿ ಸ್ವರ್ಗಸ್ಥರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇನೆ. ಮೃತರ ಅಂತಿಮಕ್ರಿಯೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮುದುವಾಡಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

