HomeLatest Newsನಮ್ಮ ಸರ್ಕಾರ ಯಾವುದೇ ಫೋನ್ ಟ್ಯಾಪಿಂಗ್ ಮಾಡುತ್ತಿಲ್ಲ, ದಾಖಲೆಗಳಿದ್ರೆ ಕೊಡಲಿ : ಗೃಹ ಸಚಿವ ಜಿ....

ನಮ್ಮ ಸರ್ಕಾರ ಯಾವುದೇ ಫೋನ್ ಟ್ಯಾಪಿಂಗ್ ಮಾಡುತ್ತಿಲ್ಲ, ದಾಖಲೆಗಳಿದ್ರೆ ಕೊಡಲಿ : ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು :  ರಾಜ್ಯದಲ್ಲಿ ಫೋನ್ ಟ್ಯಾಪಿಂಗ್ (ಕದ್ದಾಲಿಕೆ) ನಡೆಯುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸರ್ಕಾರ ಯಾವುದೇ ಫೋನ್ ಟ್ಯಾಪಿಂಗ್ ಮಾಡುತ್ತಿಲ್ಲ, ದಾಖಲೆಗಳಿದ್ರೆ ಕೊಡಲಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಸರ್ಕಾರವು ಯಾರ ಫೋನ್ ಕದ್ದಾಲಿಕೆಯನ್ನೂ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡುತ್ತಿರುವ ಫೋನ್ ಟ್ಯಾಪಿಂಗ್ ಆರೋಪಗಳನ್ನು ಸಚಿವರು ತಳ್ಳಿಹಾಕಿದ್ದಾರೆ. “ಯಾರ ಫೋನ್ ಟ್ಯಾಪ್ ಆಗಿದೆ ಎಂಬುದನ್ನು ಸ್ಪಷ್ಟವಾಗಿ ಹೆಸರಿನೊಂದಿಗೆ ಹೇಳಬೇಕು. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ರೀತಿಯ ಹೇಳಿಕೆಗಳು ಸರಿಯಲ್ಲ,” ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ಫೋನ್ ಟ್ಯಾಪಿಂಗ್ ನಡೆಯುತ್ತಿರುವುದಕ್ಕೆ ಅವರ ಬಳಿ ಯಾವುದೇ ಪುರಾವೆ ಅಥವಾ ದಾಖಲೆಗಳಿದ್ದರೆ ಅದನ್ನು ಒದಗಿಸಲಿ. ಅದನ್ನು ಬಿಟ್ಟು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪಗಳನ್ನು ಮಾಡಬಾರದು ಎಂದು ಸಚಿವರು ಸವಾಲು ಹಾಕಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇವೆ, ನಮ್ಮ ಸರ್ಕಾರವು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಲ್ಲ. ನಮಗೆ ಅಂತಹ ಅಗತ್ಯವೂ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.ಈ ಬೆಳವಣಿಗೆಯು ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular