ಬೆಂಗಳೂರು : ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ (FIR) ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಘಟಕಕ್ಕೆ ಈ ಮೂಲಕ ದೊಡ್ಡ ಮಟ್ಟದ ಸಮಾಧಾನ ಸಿಕ್ಕಂತಾಗಿದೆ.
ಡಿಕೆ ಶಿವಕುಮಾರ್ ಗೂ ಅವರ ‘ಎಕ್ಸ್’ ಪೋಸ್ಟ್ ಗೂ ಇದಕ್ಕೂ ಸಂಬಂಧವಿಲ್ಲವೆಂದು ಕೋರ್ಟ್ ನಲ್ಲಿ ಡಿಸಿಎಂ ಪರ ವಕೀಲರು ವಾದ ಮಂಡಿಸಿದ್ದರು. ವಾದ ವಿವಾದ ಆಲಿಸಿದ ಕೋರ್ಟ್ ಡಿಸಿಎಂ ಡಿಕೆಶಿ ವಿರುದ್ಧದ ಎಫ್ ಐ ಆರ್ (FIR) ಗೆ ತಡೆಯಾಜ್ಞೆ ನೀಡಿದೆ.
ಬಿಜೆಪಿ ನಾಯಕರ ಭಾವಚಿತ್ರಗಳನ್ನು ತಿರುಚಿ (morphed images) ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು

