ಬೆಂಗಳೂರು : ರಾಜ್ಯದ ರೈತರ ದಶಕಗಳ ಸಮಸ್ಯೆಯಾದ ‘ಪೋಡಿ’ ಮುಕ್ತಗೊಳಿಸಲು ಕಂದಾಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ರಾಜ್ಯಾದ್ಯಂತ ದಾಖಲೆ ಮಟ್ಟದ 2.06 ಲಕ್ಷ ಪೋಡಿ ಪ್ರಕರಣಗಳನ್ನು ಯಶಸ್ವಿಯಾಗಿ ದುರಸ್ತಿಗೊಳಿಸಲಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚುವರಿಯಾಗಿ 5 ಲಕ್ಷ ಪೋಡಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಬೃಹತ್ ಗುರಿಯನ್ನು ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷ 6 ಸಾವಿರ ಪೋಡಿ ಪ್ರಕರಣಗಳನ್ನು ದುರಸ್ತಿ ಮಾಡಲಾಗಿದ್ದು, ಮುಂದಿನ 2 ವರ್ಷಗಳಲ್ಲಿ 5 ಲಕ್ಷ ಪೋಡಿ ದುರಸ್ತಿ ಮಾಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಜಮೀನು ಸರ್ವೆ ಮತ್ತು ಮಾಲೀಕತ್ವದ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸುವ ಮೂಲಕ ರೈತರಿಗೆ ಭೂ ದಾಖಲೆಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

