HomeKarnataka5 ಲಕ್ಷ ರೂ. ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ನಕಲಿ ಪತ್ರಕರ್ತ ಅರೆಸ್ಟ್

5 ಲಕ್ಷ ರೂ. ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ನಕಲಿ ಪತ್ರಕರ್ತ ಅರೆಸ್ಟ್

ಹಾವೇರಿ: 5 ಲಕ್ಷ ರೂಪಾಯಿ ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾಚಾರ ಎಸಗಿದ ಬಳಿಕ ಖಾಸಗಿ ಕ್ಷಣದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನನ್ನು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೀಪಕ್ ಉಪಳೆ ಬಂಧಿತ ಆರೋಪಿ. ಮಹಿಳೆಗೆ 5 ಲಕ್ಷ ರೂ ಸಾಲ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ಲಾಡ್ಜ್ ಸೇರಿದಂತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಖಾಸಗಿ ವಿಡಿಯೋ ಮಾಡಿಕೊಂಡಿದ್ದಾನೆ. ಬ್ಲಾಕ್ ಮೇಲ್ ಮಾಡಿ ನಿರಂತರ ಲೈಂಗಿಕ ಸಂಪರ್ಕದಲ್ಲಿರುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಸಹಕರಿಸದಿದ್ದರೆ ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular