HomeKarnatakaಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸೇವಾ ಸದಸ್ಯರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸೇವಾ ಸದಸ್ಯರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ :   ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ Retired Civil Service Officer not below the rank of Assistant Commissioner ನಾಗರೀಕ ಸೇವಾ ಹುದ್ದೆಗೆ ಒಬ್ಬ ಸದಸ್ಯರನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನೇಮಕಗೊಳ್ಳಲು ಬಯಸುವ ಸದಸ್ಯರು ಸಹಾಯಕ ಆಯುಕ್ತರ ಹುದ್ದೆಗಿಂತ ಕಡಿಮೆ ಇಲ್ಲದ ನಿವೃತ್ತ ನಾಗರೀಕ ಸೇವಾ ಅಧಿಕಾರಿಯಾಗಿದ್ದು, ದೈಹಿಕ/ಮಾನಸಿಕವಾಗಿ ವಿಚಾರಣೆ ಸಮಯದಲ್ಲಿ ಹಾಜರಿರಲು ಸಧೃಡರಾಗಿರಬೇಕು ಹಾಗೂ ಯಾವುದೇ ರಾಜಕೀಯ ಸೈದ್ಧಾಂತಿಕ ಪಕ್ಷದೊಂದಿಗೆ ಗುರುತಿಸಿಕೊಂಡಿರಬಾರದು.

ಆಸಕ್ತಿಯುಳ್ಳ ಸಾರ್ವಜನಿಕರು ಪ್ರಕಟಣೆಗೊಂಡ 7 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಕೆ.ಜಿ ರಸ್ತೆ, ಬೆಂಗಳೂರು ಇಲ್ಲಿ ವೈಯಕ್ತಿಕ ವಿವರಗಳೊಂದಿಗೆ (ಬಯೋಡೇಟಾ) ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular