HomeJobsಬೆಳಗಾವಿಯಲ್ಲಿ ಶನಿವಾರ ಉದ್ಯೋಗ ಮೇಳ, 100 ಕಂಪನಿಗಳು ಭಾಗಿ

ಬೆಳಗಾವಿಯಲ್ಲಿ ಶನಿವಾರ ಉದ್ಯೋಗ ಮೇಳ, 100 ಕಂಪನಿಗಳು ಭಾಗಿ

ಬೆಳಗಾವಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಬೆಳಗಾವಿಯಲ್ಲಿ ಮಾರ್ಚ್ 7ರ ಶನಿವಾರ ಉದ್ಯೋಗ ಮೇಳ ಆಯೋಜಿಸಲಾಗಿದೆ. 100ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳುತ್ತಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಮಾಹಿತಿ ನೀಡಿದ್ದು, ಯುವಶಕ್ತಿಯೇ ನಮ್ಮ ದೇಶದ ಭವಿಷ್ಯ. DDU-GKY ಯೋಜನೆಯಡಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯ ಮಿಷನ್ ಬೆಳಗಾವಿ ಸಹಯೋಗದಲ್ಲಿ ಆಯೋಜಿಸಿರುವ “ಯುವ ಸಮೃದ್ಧಿ ಸಮ್ಮೇಳನ – ಉದ್ಯೋಗ ಮೇಳಕ್ಕೆ ಜಿಲ್ಲೆಯ ಎಲ್ಲಾ ಯುವ ಉದ್ಯೋಗಾಕಾಂಕ್ಷಿಗಳಿಗೆ ಹೃತ್ಪೂರ್ವಕ ಆಹ್ವಾನ ಎಂದು ಹೇಳಿದ್ದಾರೆ.

7 ಮಾರ್ಚ್ 2026, ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಸ್.ಜಿ. ಬಾಳೇಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲ, ಯುವಜನತೆಯನ್ನು ಆ ಉದ್ಯೋಗಗಳಿಗೆ ಅರ್ಹರನ್ನಾಗಿ ರೂಪಿಸುವುದು ನಮ್ಮ ಮೊದಲ ಗುರಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಕರೇ, ನಿಮ್ಮ ಕನಸುಗಳಿಗೆ ಹೊಸ ದಾರಿ ತೆರೆದಿರುವ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಬನ್ನಿ, ನಿಮ್ಮ ಭವಿಷ್ಯವನ್ನು ನಿಮ್ಮ ಕೈಯಲ್ಲಿ ಕಟ್ಟಿಕೊಳ್ಳಿ ಎಂದು ಸಚಿವರು ಕರೆ ನೀಡಿದ್ದಾರೆ.

ಉದ್ಯೋಗ ಮೇಳದ ವಿವರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೌಶಲ್ಯ ಮಿಷನ್, ಬೆಳಗಾವಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಬೆಂಗಳೂರು ಸಂಜೀವಿನಿ-KSLRPS ಯೋಜನೆಯ DDU-GKY ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು ನಗರಗಳಿಂದ 100ಕ್ಕೂ ಹೆಚ್ಚು ವಿವಿಧ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿದ್ದು, ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲ ನಿರುದ್ಯೋಗಿ ಯುವಕ-ಯುವತಿಯರು ಪಾಲ್ಗೊಳ್ಳಬಹುದಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಯಾವುದೇ ಪದವಿ, ಡಿಪ್ಲೊಮೊ, ಸ್ನಾತಕೋತ್ತರ ಪದವೀಧರರು ಕೂಡ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆಯಬಹುದಾಗಿರುತ್ತದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular