ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6, 2026) ಮಂಡಿಸಿದ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯಲ್ಲಿ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಮತ್ತು ವೈದ್ಯಕೀಯ ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ 2,500 ಹುದ್ದೆಗಳನ್ನು ಅತೀ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಯಾವೆಲ್ಲಾ ಹುದ್ದೆಗಳು?: ಇದರಲ್ಲಿ ಪ್ರಮುಖವಾಗಿ ವೈದ್ಯಾಧಿಕಾರಿಗಳು (Doctors), ತಜ್ಞ ವೈದ್ಯರು (Specialists), ಮತ್ತು ಶುಶ್ರೂಷಕರು (Nurses) ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ನಡೆಯಲಿದೆ.ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರ (PHC) ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಲಭ್ಯತೆಯನ್ನು ಖಚಿತಪಡಿಸುವುದು ಈ ನೇಮಕಾತಿಯ ಮುಖ್ಯ ಗುರಿಯಾಗಿದೆ.

