ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ನಲ್ಲಿ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ.
ಬೃಹತ್ ನೇಮಕಾತಿ: ಈ ವರ್ಷ ಒಟ್ಟು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ವಯೋಮಿತಿಯಲ್ಲಿ ಸಡಿಲಿಕೆ: ನೇಮಕಾತಿ ಪ್ರಕ್ರಿಯೆಯಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಗಮನಿಸಿ, ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಆಡಳಿತ ಬಲವರ್ಧನೆ: ಪ್ರಮುಖ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಕೆಲಸದ ವೇಗವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.
ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಸಿಎಂ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

