ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ಮತ್ತು ಏರ್ ಕ್ರಾಫ್ಟ್ ಮ್ಯಾನುಫ್ಯಾಕ್ಚರಿಂಗ್ ಅಸೆಂಬ್ಲಿ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಪ್ರಯಾಣಿಕರ ಸೇವೆ ಜೊತೆಗೆ ವಿಮಾನ ಯಾನ ತರಬೇತಿ, ಏರೋ ಸ್ಪೇಸ್ ಕೈಗಾರಿಕಾ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಬೆಳೆಯುವ ನಿರೀಕ್ಷೆ ಇದೆ.
ಕಳೆದ ವರ್ಷ ಮೇ ನಲ್ಲೇ ಸಚಿವ ಎಂ.ಬಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಯು ಯಾನ ತರಬೇತಿ ಸಂಸ್ಥೆ ಸ್ಥಾಪನೆಗೆ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಯೋಜನೆ ರೂಪಿಸಿದೆ.

