HomeKarnatakaಸರ್ವರಿಗೂ ಸೂರು ಕಲ್ಫಿಸಲು ರಿಯಾಯಿತಿಯಲ್ಲಿ ನಿವೇಶನ, ಒಂದು ಲಕ್ಷ ಮನೆ ಮಂಜೂರು: ಸಹಾಯಧನ 3 ಲಕ್ಷದವರೆಗೆ...

ಸರ್ವರಿಗೂ ಸೂರು ಕಲ್ಫಿಸಲು ರಿಯಾಯಿತಿಯಲ್ಲಿ ನಿವೇಶನ, ಒಂದು ಲಕ್ಷ ಮನೆ ಮಂಜೂರು: ಸಹಾಯಧನ 3 ಲಕ್ಷದವರೆಗೆ ಹೆಚ್ಚಳ

ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ನಮ್ಮ ಮನೆ ಯೋಜನೆಯಡಿ ಮುಂದಿನ ಎರಡು ವರ್ಷದಲ್ಲಿ ರಿಯಾಯಿತಿ ದರದಲ್ಲಿ 50,000 ನಿವೇಶನ ವಿತರಣೆ ಸೇರಿದಂತೆ ವಸತಿ ಇಲಾಖೆಯ ಹಲವು ಯೋಜನೆ ಘೋಷಿಸಲಾಗಿದೆ.

ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ಬಿ.ಎಲ್.ಸಿ. ಆಧಾರಿತ ಒಂದು ಲಕ್ಷ ಮನೆ ಮಂಜೂರು ಮಾಡಲಾಗುವುದು. ಈ ಯೋಜನೆಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 1.20 ಲಕ್ಷ ರೂ.ನಿಂದ 2 ಲಕ್ಷ ರೂ ಗೆ ಹೆಚ್ಚಳ ಮಾಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಎರಡು ಲಕ್ಷ ರೂ.ನಿಂದ ಮೂರು ಲಕ್ಷ ರೂ.ಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆಗೆ ಮ್ಯಾನುವಲ್ ಲಾಟರಿ ಪ್ರಕ್ರಿಯೆ ಬದಲಾಗಿ ಆನ್ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಮಂತ್ರಿಯ ಆವಾಸ್ ಯೋಜನೆಯಡಿ 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅನುಷ್ಠಾನಗೊಳಿಸುತ್ತಿದೆ. ಫಲಾನುಭವಿಗಳ ವಂತಿಗೆ ರಾಜ್ಯ ಸರ್ಕಾರದಿಂದ 1136 ಕೋಟಿ ರೂ. ಅನುದಾನ ಹೆಚ್ಚುವರಿಯಾಗಿ ಒದಗಿಸಲಾಗಿದೆ. ಕಳೆದ ಸಾಲಿನಲ್ಲಿ ಒಟ್ಟಾರೆ 79,134 ಮನೆಗಳ ಲೋಕಾರ್ಪಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ಮನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular