HomeLatest News8000 ಪೊಲೀಸರ ನೇಮಕಾತಿಗೆ ಗ್ರೀನ್ ಸಿಗ್ನಲ್

8000 ಪೊಲೀಸರ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಈ ವರ್ಷ 8000 ಪೊಲೀಸರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ, ಪೊಲೀಸರ ನೇಮಕಾತಿಗಾಗಿ ಪೊಲೀಸ್ ಮಂಡಳಿ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಹೊಸದಾಗಿ ರಚನೆಯಾದ ಮಾದಕ ವಸ್ತು ವಿರೋಧಿ ಕಾರ್ಯಪಡೆಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಪೊಲೀಸ್ ನೇಮಕಾತಿಗೆ ಆಡಳಿತಾತ್ಮಕವಾಗಿ ಎದುರಾಗುತ್ತಿದ್ದ ತಾಂತ್ರಿಕ ಅಡಚಣೆ ಪರಿಹರಿಸಲು ಪೊಲೀಸ್ ನೇಮಕಾತಿ ಮಂಡಳಿ ರಚಿಸುವುದಾಗಿ ಪ್ರಕಟಿಸಿದ್ದಾರೆ. ಹೊಸದಾಗಿ 12 ಪೋಲಿಸ್ ಠಾಣೆಗಳ ಸ್ಥಾಪನೆ, ಹೊಸ ವಾಹನಗಳ ವಿತರಣೆಗೆ 75 ಕೋಟಿ ರೂ. ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವರ್ಷ 8000 ಪೊಲೀಸರ ನೇಮಕಾತಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಆದ್ಯತೆ ನೀಡಲಾಗಿದೆ. ಡ್ರೋನ್ ಸೇರಿದಂತೆ ಅತ್ಯಾಧುನಿಕ ಉಪಕರಣ ಖರೀದಿಗೆ 1142 ಕೋಟಿ ರೂ. ಅನುದಾನ ನೀಡಲಾಗಿದೆ. ರಾಯಚೂರಿನಲ್ಲಿ ಹೊಸದಾಗಿ ಸೆಂಟ್ರಲ್ ಜೈಲು ನಿರ್ಮಿಸುವುದಾಗಿ ಪ್ರಕಟಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular