ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನಿತಿನ್(26) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ದಿನಸಿ ವರ್ತಕ ಬೆಲ್ಲದ ಕೃಷ್ಣಪ್ಪ ಅವರ ಮೊಮ್ಮಗ ಹಾಗೂ ನಾಗರಾಜ್ ಅವರ ಪುತ್ರ ನಿತಿನ್ ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

